ಸಕಲೇಶಪುರ, ಮೇ 16: ಸೋಷಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಸಕಲೇಶಪುರ ವಿಧಾನಸಭಾ ಕ್ಷೇತ್ರ ಸಮಿತಿಯ ವತಿಯಿಂದ ಇಂದು ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಸ್ಥಗಿತಗೊಂಡಿರುವ ಸ್ಕ್ಯಾನಿಂಗ್ ಸೌಲಭ್ಯವನ್ನು ತಕ್ಷಣ ಪುನರಾರಂಭಿಸುವಂತೆ ಆಗ್ರಹಿಸಿ ತಾಲೂಕು ಆರೋಗ್ಯಾಧಿಕಾರಿ ಮಹೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ಸರ್ಕಾರಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಸೌಲಭ್ಯ ಸ್ಥಗಿತಗೊಂಡಿರುವುದರಿಂದ ಗ್ರಾಮೀಣ ಭಾಗದ ಬಡ ಹಾಗೂ ಮಧ್ಯಮ ವರ್ಗದ ಕೂಲಿ ಕಾರ್ಮಿಕ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಗರ್ಭಿಣಿಯರು, ವೃದ್ಧರು ಹಾಗೂ ತುರ್ತು ಚಿಕಿತ್ಸೆಗೆ ಒಳಗಾಗುವ ರೋಗಿಗಳು ಖಾಸಗಿ ಸ್ಕ್ಯಾನಿಂಗ್ ಕೇಂದ್ರಗಳಿಗೆ ತೆರಳಿ ಹೆಚ್ಚಿನ ಹಣ ಪಾವತಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಯಿತು.ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿರುವ ಸ್ಕ್ಯಾನಿಂಗ್ ಕೇಂದ್ರವನ್ನು ಶೀಘ್ರವಾಗಿ ಪುನರಾರಂಭಿಸಿ, ಅಗತ್ಯ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಬೇಕೆಂದು SDPI ಮುಖಂಡರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ SDPI ಸಕಲೇಶಪುರ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ವಾಜೀದ್ ಪಾಶ ಸಹ ಕಾರ್ಯದರ್ಶಿಯಾದ ಸಾದಿಕ್ ಮಂಜರಾಬಾದ್ , ಮಾಧ್ಯಮ ಉಸ್ತುವಾರಿ ಯಾಸಿನ್ ಸಕಲೇಶಪುರ ಹಾಗೂ ಅನೇಮಹಲ್ ಬ್ರಾಂಚ್ ಕಾರ್ಯದರ್ಶಿಯಾದ ನಾಸೀರ್ ಆನೇಮಹಲ್ ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *