ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ನಾಳೆ ಹಮ್ಮಿಕೊಂಡಿದ್ದ ಬೃಹತ್ ಬಸ್ ಮುಷ್ಕರಕ್ಕೆ ಮಾನ್ಯ ಹೈಕೋರ್ಟ್ ತಡೆಯೊಡ್ಡಿದೆ. ನಾಳೆ ಯಾವುದೇ ಕಾರಣಕ್ಕೂ ಮುಷ್ಕರ ನಡೆಸಬಾರದು ಎಂದು ಸಾರಿಗೆ ನೌಕರರ ಸಂಘಟನೆಗಳಿಗೆ ಕಡಕ್ ಸೂಚನೆ ನೀಡಿರುವ ನ್ಯಾಯಾಲಯ, ಸಾರ್ವಜನಿಕರ ಹಿತದೃಷ್ಟಿಯಿಂದ ಈ ಮಹತ್ವದ ಆದೇಶ ಹೊರಡಿಸಿದೆ.

ಇದರಿಂದಾಗಿ ನಾಳೆ ಬಸ್ ಸಂಚಾರ ಸ್ಥಗಿತಗೊಳ್ಳಬಹುದು ಎಂಬ ಆತಂಕದಲ್ಲಿದ್ದ ಸಾರ್ವಜನಿಕರು ಹಾಗೂ ಪ್ರಯಾಣಿಕರು ನಿಟ್ಟುಸಿರು ಬಿಡುವಂತಾಗಿದೆ.

ಮುಷ್ಕರದ ವಿರುದ್ಧ ಸಲ್ಲಿಕೆಯಾಗಿದ್ದ ಪಿಐಎಲ್ಸಾರಿಗೆ ನೌಕರರ ದಿಢೀರ್ ಮುಷ್ಕರದ ನಿರ್ಧಾರವನ್ನು ಪ್ರಶ್ನಿಸಿ ನಿನ್ನೆಯಷ್ಟೇ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸಲ್ಲಿಕೆಯಾಗಿತ್ತು. ವೇದಾವತಿ ಮತ್ತು ಲೆಕ್ಕಸಂದ್ರದ ಶ್ರೀಧರ್ ಎಂಬುವವರು ಈ ಅರ್ಜಿಯನ್ನು ಸಲ್ಲಿಸಿದ್ದರು.

ವಿಶೇಷವೆಂದರೆ, ಅರ್ಜಿ ಸಲ್ಲಿಸಿದವರು ಸಮಾಜದ ಸಾಮಾನ್ಯ ವರ್ಗಕ್ಕೆ ಸೇರಿದ ಮನೆಗೆಲಸದ ಮಹಿಳೆ ಮತ್ತು ಕಟ್ಟಡ ಕಾರ್ಮಿಕರಾಗಿದ್ದಾರೆ. ನಾಳೆಯ ಮುಷ್ಕರದಿಂದ ದೈನಂದಿನ ಕೂಲಿ ಕಾರ್ಮಿಕರು ಹಾಗೂ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಲಿದೆ, ಆದ್ದರಿಂದ ಮುಷ್ಕರವನ್ನು ನಿರ್ಬಂಧಿಸಬೇಕು ಎಂದು ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed