
ಸಕಲೇಶಪುರ : ಹೆಚ್ ಡಿ ದೇವೇಗೌಡರ 94 ನೇ ಹುಟ್ಟುಹಬ್ಬವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಚಂಚಲ ಕುಮಾರಸ್ವಾಮಿ ರವರ ನೇತೃತ್ವದಲ್ಲಿ ಆಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಚಂಚಲಾಕುಮಾರಸ್ವಾಮಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಜನ್ಮದಿನ ಅಂಗವಾಗಿ ವಿಶೇಷ ಪೂಜೆ ಮತ್ತು ತಾಲ್ಲೂಕು ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳವಾಗಿ ಅರ್ಥಪೂರ್ಣವಾಗಿ ಆಚರಿಸಿದ್ದೇವೆ ಹಾಗೂ ಈ ಸಂದರ್ಭದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ನೀಡಿ ದೇವೇಗೌಡರು ದೇಶದ ರಾಜಕೀಯ ಇತಿಹಾಸದಲ್ಲಿ ವಿಶಿಷ್ಟ ಛಾಪು ಮೂಡಿಸಿದ ನಾಯಕ. ರೈತರ ಸಮಸ್ಯೆ, ಗ್ರಾಮೀಣಾಭಿವೃದ್ಧಿ ಹಾಗೂ ಜನಸಾಮಾನ್ಯರ ಪರ ಹೋರಾಟದ ಮೂಲಕ ಅವರು ಜನಮನ ಗೆದ್ದಿದ್ದಾರೆ. ಅವರ ಸರಳತೆ ಮತ್ತು ಜನಪರ ಆಡಳಿತ ಇಂದಿಗೂ ಅನೇಕರಿಗೆ ಪ್ರೇರಣೆ ನೀಡಿದೆ ಮುಂದಿನ ದಿನಗಳಲ್ಲಿ ಜೆಡಿಎಸ್ ವರಿಷ್ಠರ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ರಾಜ್ಯ ಮತ್ತು ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷವನ್ನು ಗಟ್ಟಿಯಾಗಿ ಸಂಘಟಿಸಿ, ರಾಜ್ಯದಲ್ಲಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಸಂಕಲ್ಪ ಮಾಡೋಣ, ಕಾರ್ಯತತ್ಪರತೆ ಮೆರೆಯೋಣ ಎಂದು ನುಡಿದರು.
ದೇವೇಗೌಡರ ಆರೋಗ್ಯ ವೃದ್ದಿಸಲಿ, ಅವರ ಮಾರ್ಗದರ್ಶನದಲ್ಲಿ ರಾಜ್ಯ ಅಭಿವೃದ್ದಿ ಕಾಣಲು ಸಾಧ್ಯವಾಗುವಂತ ಶಕ್ತಿಯನ್ನು ದೇವರು ಕರುಣಿಸಲಿ, ಜನಾಶೀರ್ವಾದಿಂದ ರಾಜ್ಯ ಸುಭೀಕ್ಷದೆಡೆಗೆ ಸಾಗುವಂತಹ ದಿನಗಳು ಬರಲಿ ಎಂದು ಪ್ರಾರ್ಥಿಸಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಉಜ್ಮ ರುಜ್ಮಿ ಸುದರ್ಶನ್, ಜೆಡಿಎಸ್ ಮುಖಂಡರುಗಳಾದ ಸಚಿನ್ ಪ್ರಸಾದ್, ಭಾಸ್ಕರ್ , ಸುದರ್ಶನ್ ಹಾಡ್ಯ, ಸುಮನ್ ಹೆತ್ತೂರು, ಗೊದ್ದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಕೌಶಿಕ್, ಸಕಲೇಶಪುರ ಪುರಸಭೆಮಾಜಿ ಅಧ್ಯಕ್ಷರಾದ ಜ್ಯೋತಿ ರಾಜಕುಮಾರ್, ಪುರಸಭೆ ಸದಸ್ಯರಾದ ಪ್ರಜ್ವಲ್, ಹಾಗೂ ಮುಖಂಡರು ಕಾರ್ಯಕರ್ತಗಳು ಭಾಗವಹಿಸಿದ್ದರು.






