ಸಕಲೇಶಪುರ :- 2026-27ನೇ ಸಾಲಿನ ಮುಂಗಾರು ಹಂಗಾಮು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಅಗತ್ಯವಾದ ಭತ್ತದ ಬಿತ್ತನೆ ಬೀಜವನ್ನು ಕೃಷಿ ಇಲಾಖೆಯಿಂದ ರೈತ ಸಂಪರ್ಕ ಕೇಂದ್ರಗಳಲ್ಲಿ ದಾಸ್ತಾನು ಮಾಡಲಾಗಿದೆ ಎಂದು ಕೃಷಿ ಅಧಿಕಾರಿ ಕೇಶವಮೂರ್ತಿ ಎಸ್.ಕೆ. ತಿಳಿಸಿದ್ದಾರೆ.

ತಾಲೂಕಿನಲ್ಲಿ ಹೆಚ್ಚಿನ ಬೇಡಿಕೆ ಹೊಂದಿರುವ “ತುಂಗಾ” ತಳಿಯ ಭತ್ತದ ಬೀಜ ಈ ವರ್ಷ ಬೇಡಿಕೆಗೆ ಅನುಗುಣವಾಗಿ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದ್ದು, ಯಾವುದೇ ಕೊರತೆ ಇರುವುದಿಲ್ಲ ಎಂದು ಅವರು ಮಾಹಿತಿ ನೀಡಿದ್ದಾರೆ.ಪಹಣಿ ಹೊಂದಿರುವ ರೈತರು ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್ ಅಥವಾ ಫ್ರೂಟ್ಸ್ ಐಡಿ ಸಂಖ್ಯೆಯ ಜೆರಾಕ್ಸ್ ಪ್ರತಿಯೊಂದಿಗೆ ಸಮೀಪದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಭತ್ತದ ಬಿತ್ತನೆ ಬೀಜ ಪಡೆಯಬಹುದಾಗಿದೆ.

ವಿಶೇಷ ಸೂಚನೆಯಾಗಿ “ತುಂಗಾ” ಹಾಗೂ “ಆರ್‌ಎನ್‌ಆರ್” ತಳಿಯ ಭತ್ತದ ಬೀಜಗಳನ್ನು ಆಗಸ್ಟ್ ತಿಂಗಳವರೆಗೆ ರೈತ ಸಂಪರ್ಕ ಕೇಂದ್ರಗಳಲ್ಲಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.

ಹೆತ್ತೂರು , ಕಸಬಾ, ಯಸಳೂರು ಹಾಗೂ ಬೆಳಗೋಡು ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜ ವಿತರಣೆ ನಡೆಯಲಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದ್ದಾರೆ.

ಕೇಶವಮೂರ್ತಿ ಎಸ್.ಕೆ.ಕೃಷಿ ಅಧಿಕಾರಿರೈತ ಸಂಪರ್ಕ ಕೇಂದ್ರಹೆತೂರು / ಕಸಬಾ / ಯಸಳೂರು / ಬೆಳಗೋಡುಸಂಪರ್ಕಿಸಿ :- 9972499813

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *