ಸಕಲೇಶಪುರ : ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ವ್ಯಾಸಂಗ ಮಾಡಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳು ಹಾಗೂ ಎಸ್‌ಎಸ್‌ಎಲ್‌ಸಿ ಕನ್ನಡ ಐಚ್ಛಿಕ ವಿಷಯದಲ್ಲಿ 125ಕ್ಕೆ 125 ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸುವ ಉದ್ದೇಶದಿಂದ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಘಟಕ, ಹೆತ್ತೂರು ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮೇ 30ರಂದು ಶನಿವಾರ ಬೆಳಿಗ್ಗೆ 10-30ಗಂಟೆಗೆ ಹೆತ್ತೂರು ಹೋಬಳಿ ಬೆಳೆಗಾರರ ಸಂಘದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ..

ಕಾರ್ಯಕ್ರಮವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಹೆಚ್. ಎಲ್. ಮಲ್ಲೇಶ್ ಗೌಡ ಉದ್ಘಾಟಿಸಲಿದ್ದಾರೆ. ಗ್ರಾಮೀಣ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಅವರ ಪ್ರತಿಭೆಯನ್ನು ಗುರುತಿಸಿ ಸನ್ಮಾನಿಸುವ ಕಾರ್ಯವನ್ನು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಘಟಕ,ಕೈಗೊಂಡಿದೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಸಾಧನೆಯನ್ನು ಸಮಾಜದ ಮುಂದೆ ತಂದು, ಇತರ ವಿದ್ಯಾರ್ಥಿಗಳಿಗೂ ಪ್ರೇರಣೆಯಾಗುವಂತೆ ಮಾಡುವ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳ ಸಾಧನೆ ಇತರ ಮಕ್ಕಳಿಗೂ ಮಾರ್ಗದರ್ಶನವಾಗಲಿ ಹಾಗೂ ಮುಂದಿನ ಜೀವನದಲ್ಲಿ ಇನ್ನಷ್ಟು ಸಾಧನೆ ಮಾಡಲು ದಾರಿದೀಪವಾಗಲಿ ಎಂಬ ಆಶಯದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ ಘಟಕ,ಅಧ್ಯಕ್ಷರು ಹೆಚ್. ಪಿ. ರವಿಕುಮಾರ್ ತಿಳಿಸಿದ್ದಾರೆ.

ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು, ಪೋಷಕರು, ಕನ್ನಡಾಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *