
ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಲೋಕಭವನದಲ್ಲಿನಾಳೆ (ಬುಧವಾರ) ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕಾರ್ಯಕ್ರಮಕ್ಕೆ ಸರ್ಕಾರದಿಂದ ರಾಜ್ಯದ ವಿವಿಧ ಮಠಾಧಿಪತಿಗಳಿಗೆ ಆಹ್ವಾನ ನೀಡಲಾಗಿದೆ.ನಿಯೋಜಿತ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ ಮೇರೆಗೆ ಸರ್ಕಾರದಿಂದಲೇ ಅಧಿಕೃತ ಆಹ್ವಾನ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪ್ರಮಾಣ ವಚನ ಸಮಾರಂಭಕ್ಕೆ 55 ಸ್ವಾಮೀಜಿಗಳು, ಫಾದರ್ ಹಾಗೂ ಮೌಲ್ವಿಗಳಿಗೂ ಆಹ್ವಾನ ನೀಡಲಾಗಿದೆ.
ಆಹ್ವಾನದ ಪಟ್ಟಿಯಲ್ಲಿರುವ ಪ್ರಮುಖ ಶ್ರೀಗಳ ಹೆಸರುಗಳಿವು….
ನಿರ್ಮಲಾನಂದನಾಥ ಮಹಾಸ್ವಾಮಿಗಳು, ಆದಿಚುಂಚನಗಿರಿ ಮಹಾಸಂಸ್ಥಾನಮಠ, ಆದಿಚುಂಚನಗಿರಿ
ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು, ಸುತ್ತೂರುಮಠ, ಮೈಸೂರು.
ಸಿದ್ಧಲಿಂಗ ಮಹಾಸ್ವಾಮಿಗಳು, ಶ್ರೀಸಿದ್ಧಗಂಗಾಮಠ, ತುಮಕೂರು.
ನಿಶ್ಚಲಾನಂದನಾಥ ಮಹಾಸ್ವಾಮಿಗಳು, ವಿಶ್ವ ಒಕ್ಕಲಿಗ ಮಹಾಸಂಸ್ಥಾನಮಠ, ಬೆಂಗಳೂರು.*
ನಂಜಾವಧೂತ ಮಹಾಸ್ವಾಮಿಗಳು, ಗುರು ಬೃಹ್ಮಶ್ವರಮಠ, ಪಟ್ಟನಾಯಕನಹಳ್ಳಿ, ಶಿರಾ.
* ಕರಿವೃಷಭ ದೇಶಿಕೇಂದ್ರ ಶಿವಯೋಗಿ ಮಹಾಸ್ವಾಮಿಗಳು, ಕಾಡಸಿದ್ದೇಶ್ವರಮಠ, ನೊಣವಿನಕೆರೆ.
* ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ತರಳಬಾಳು ಬೃಹನ್ಮಠ, ಸಿರಿಗೆರೆ.
* ವಚನಾನಂದ ಮಹಾಸ್ವಾಮಿಗಳು, ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ, ಹರಿಹರ.
* ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ, ಮಹಾಸ್ವಾಮಿಗಳು, ರಂಭಾಪುರಿಪೀಠ, ಬಾಳೆಹೊನ್ನೂರು.
* ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಭೋವಿ ಗುರುಪೀಠ, ಚಿತ್ರದುರ್ಗ.*
ಶಾಂತವೀರ ಸ್ವಾಮೀಜಿ, ಕುಂಚಟಿಗ ಗುರುಪೀಠ, ಹೊಸದುರ್ಗ.
* ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ, ಮಾದಾರ ಚನ್ನಯ್ಯ ಗುರುಪೀಠ, ಚಿತ್ರದುರ್ಗ.
* ವಿಶ್ವಪ್ರಸನ್ನ ತೀರ್ಥ ಮಹಾಸ್ವಾಮಿಗಳು, ಪೇಜಾವರಮಠ, ಉಡುಪಿ.*
ರವಿಶಂಕರ ಗುರೂಜೀ, ಆರ್ಟ್ ಆಪ್ ಲಿವಿಂಗ್ ಆಶ್ರಮ, ಬೆಂಗಳೂರು.*
ಸ್ವಸ್ತಿಶ್ರೀ ಆಗಮಕೀರ್ತಿ ಭಟ್ಟಾರಕ ಮಹಾಸ್ವಾಮಿಗಳು, ದಿಗಂಬರ ಜೈನಮಠ, ಶ್ರವಣಬೆಳಗೊಳ.*
ವೀರಭದ್ರ ಚನ್ನಮಲ್ಲ ಮಹಾಸ್ವಾಮಿಗಳು, ನಿಡುಮಾಮಡಿಮಠ, ಬೆಂಗಳೂರು.
* ಆನಂದ ಬಿಕ್ಕು, ಮಹಾಬೋಧಿ ಸೊಸಾಯಿಟಿ, ಬೆಂಗಳೂರು.*
ಆರ್ಚಬಿಷಪ್ ಡಾ.ಪೀಟರ್ ಮಚಾಡೋ, ಕ್ಯಾಥೋಲಿಕ್ ಚರ್ಚ್, ಬೆಂಗಳೂರು.*
ಹಜರತ್ ಹಫೀಜ್ ಡಾ.ಸೈಯದ್ ಮೊಹಮ್ಮದ್ ಅಲಿ ಅಲ್ ಹುಸೈನ್, ದರ್ಗಾ ಹಜರತ್ ಸ್ವಾಜಾ ಬಂದೆನವಾಜ್, ಕಲಬುರ್ಗಿ.
