ಸಕಲೇಶಪುರ: ಸಕಲೇಶಪುರ ತಾಲೂಕಿನ ದೋಣಿಗಲ್‌ನ ನೂರಾನಿ ಶಾದಿಮಹಲ್‌ನಲ್ಲಿ ಇಂದು SDPI ಸಕಲೇಶಪುರ ವಿಧಾನಸಭಾ ಕ್ಷೇತ್ರದ ಮಟ್ಟದ ಕಾರ್ಯಕರ್ತರ ಸಮಾವೇಶ ನಡೆಯಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ SDPI ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಜನಾಬ್ ಅಫ್ಸರ್ ಕೊಡ್ಲಿಪೇಟೆ ಮಾತನಾಡಿ, “ಇಂದು ನಾವು ಇಲ್ಲಿ ಕೇವಲ ಒಂದು ಸಭೆಗಾಗಿ ಸೇರಿಲ್ಲ. ಮುಂದಿನ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸಲು, ಪಕ್ಷವನ್ನು ಇನ್ನಷ್ಟು ಬಲಪಡಿಸಲು ಹಾಗೂ ಜನರ ವಿಶ್ವಾಸವನ್ನು ಗಳಿಸಲು ಒಂದಾಗಿದ್ದೇವೆ. ಚುನಾವಣೆ ಎನ್ನುವುದು ಕೇವಲ ಮತ ಕೇಳುವ ಪ್ರಕ್ರಿಯೆಯಲ್ಲ; ಅದು ಜನರ ಸಮಸ್ಯೆಗಳನ್ನು ಅರ್ಥಮಾಡಿಕೊಳ್ಳುವ, ಅವರ ಆಶೋತ್ತರಗಳಿಗೆ ಸ್ಪಂದಿಸುವ ಮತ್ತು ಉತ್ತಮ ಆಡಳಿತದ ಭರವಸೆ ನೀಡುವ ಪ್ರಜಾಪ್ರಭುತ್ವದ ಹಬ್ಬವಾಗಿದೆ” ಎಂದು ಹೇಳಿದರು.

ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನು ಸಂಘಟನೆಯ ಶಕ್ತಿಯಾಗಿದ್ದು, ಬೂತ್, ವಾರ್ಡ್ ಹಾಗೂ ಗ್ರಾಮ ಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು. ಮನೆ ಮನೆಗೆ ಭೇಟಿ ನೀಡಿ ಪಕ್ಷದ ನೀತಿಗಳು, ಕಾರ್ಯಕ್ರಮಗಳು ಹಾಗೂ ಜನಪರ ಹೋರಾಟಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದು ಅವರು ಕರೆ ನೀಡಿದರು.

ಕಾರ್ಯಕ್ರಮದಲ್ಲಿ SDPI ಹಾಸನ ಜಿಲ್ಲಾ ಅಧ್ಯಕ್ಷ ಇಮ್ರಾನ್ ಅರೇಹಳ್ಳಿ, ಜಿಲ್ಲಾ ಉಪಾಧ್ಯಕ್ಷ ಸಿದ್ದೀಕ್ ಆನೆಮಹಲ್, ಜಿಲ್ಲಾ ಸಮಿತಿ ಸದ್ಯಸರು ಅಮೀರ್ ಜಾನ್, ಸಕಲೇಶಪುರ ವಿಧಾನಸಭಾ ಕ್ಷೇತ್ರದ ಉಪಾಧ್ಯಕ್ಷ ಸೈಯದ್ ಮೈದೀನ್ ಉಪಸ್ಥಿತರಿದ್ದರು.

ಸಭೆಯ ಅಧ್ಯಕ್ಷತೆಯನ್ನು ಸಕಲೇಶಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ವಾಜಿದ್ ಪಾಶಾ ವಹಿಸಿದ್ದರು. ಕ್ಷೇತ್ರ ಕಾರ್ಯದರ್ಶಿ ಹೈದರ್ ಸ್ವಾಗತಿಸಿದರು. ಅಶ್ರಫ್ ಚಿಲ್ಮಿ ವಂದಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *