ಹಾಸನ, ಜೂನ್ 17: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡುವ ಉದ್ದೇಶದಿಂದ ಹಾಸನದ ಶ್ರೀ ಬಸವೇಶ್ವರ ದೇವಾಲಯ ಆವರಣದಲ್ಲಿ ಹಾಸನ ತಾಲ್ಲೂಕು ಘಟಕದ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಹಾಸನ ತಾಲ್ಲೂಕು ಘಟಕದ ಅಧ್ಯಕ್ಷ ಕಟ್ಟಾಯ ಶಿವಕುಮಾರ್ ಮಾತನಾಡಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ರಾಷ್ಟ್ರೀಯ ಹಾಗೂ ರಾಜ್ಯ ಮಟ್ಟದಲ್ಲಿ ಸಂಘಟನಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಗ್ರಾಮ, ಪಂಚಾಯಿತಿ ಹಾಗೂ ತಾಲ್ಲೂಕು ಮಟ್ಟಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಾಯಿಸಬೇಕಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಹೆಚ್ಚಿನ ಸದಸ್ಯತ್ವ ಮಾಡಿರುವ ಪದಾಧಿಕಾರಿಗಳು ಹಾಗೂ ನಿರ್ದೇಶಕರನ್ನು ಗೌರವಿಸಲಾಯಿತು. ಇದೇ ವೇಳೆ ಹಾಸನದಲ್ಲಿ ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರುಗಳನ್ನು ಆಹ್ವಾನಿಸಿ ಲಿಂಗಪೂಜೆ, ಲಿಂಗಾಧಾರಣೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾನಿಸಲಾಯಿತು. ಅಲ್ಲದೆ ಸ್ಥಳೀಯ ಆಸ್ಪತ್ರೆಗಳ ಸಹಯೋಗದೊಂದಿಗೆ ಹೃದಯ ತಪಾಸಣೆ ಮತ್ತು ಆರೋಗ್ಯ ಶಿಬಿರಗಳನ್ನು ಆಯೋಜಿಸುವ ನಿರ್ಧಾರವೂ ಕೈಗೊಳ್ಳಲಾಯಿತು.

ಸಭೆಯಲ್ಲಿ ತಾಲ್ಲೂಕು ಸಮಿತಿಯ ಉಪಾಧ್ಯಕ್ಷರಾದ ಟಿ.ಪಿ. ನಾಗರಾಜ್, ಲೀಲಾ ಧರ್ಮಪ್ಪ, ಪ್ರಧಾನ ಕಾರ್ಯದರ್ಶಿ ಹೆಚ್.ವಿ. ಹೇಮಂತ್ ಕುಮಾರ್, ಸಹಕಾರ್ಯದರ್ಶಿ ಶೆಟ್ಟಿಹಳ್ಳಿ ಧರ್ಮ, ಚಾಂದಿನಿ ಭೂಷಣ್, ಜಿಲ್ಲಾ ಉಪಾಧ್ಯಕ್ಷೆ ಗೀತಾ ಪುಟ್ಟಸ್ವಾಮಿ, ಜಿಲ್ಲಾ ನಿರ್ದೇಶಕರಾದ ಶೋಭನ್ ಬಾಬು, ಹೆಚ್.ಎನ್. ಶರತ್ ಭೂಷಣ್, ಹೆಚ್. ವಿಜಯ್ ಕುಮಾರ್ ಹಾಗೂ ತಾಲ್ಲೂಕು ನಿರ್ದೇಶಕರಾದ ರಾಜಶೇಖರ್ ಮೂರ್ತಿ (ಪಾಪು), ಡಿ.ವಿ. ಮದನ್, ಮಯೂರಿ ಲೋಕೇಶ್, ಸಾವಿತ್ರಿ ವಿಜಯ್ ಕುಮಾರ್, ಸಂಪತ್ ಕುಮಾರ್, ಮಲ್ಲಿಗೆವಾಳು ಮೋಹನ್ ಕುಮಾರ್, ದೇವರಾಜ್, ಬಿ. ದಿವಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮಹಿಳಾ ನಿರ್ದೇಶಕರಾದ ಅನುಸೂಯಾ ಕಲ್ಯಾಣಕುಮಾರ್, ಸುಶೀಲಾ ಪಾಲನೇತ್ರ, ಸವಿತಾ ಭೂಷಣ್ ಹಾಗೂ ಶೈಲಾ ಮದನ್ ಅವರು ಹೆಚ್ಚಿನ ಸದಸ್ಯರನ್ನು ನೋಂದಾಯಿಸಿರುವ ಹಿನ್ನೆಲೆಯಲ್ಲಿ ಸನ್ಮಾನಿಸಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *