ಸಕಲೇಶಪುರ :- ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬೆಟ್ಟದ ಭೈರವೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಕುರಿತು ಹಾಗೂ ದೇವಸ್ಥಾನದ ಶೌಚಾಲಯ ವ್ಯವಸ್ಥೆ ಮತ್ತು ಸಿಸಿ ಕ್ಯಾಮೆರಾ ಅಳವಡಿಕೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಬಗ್ಗೆ ಶಾಸಕರು ಹಾಗೂ ಪೊಲೀಸ್ ಇಲಾಖೆಯ ಪ್ರಮುಖರೊಂದಿಗೆ ಚರ್ಚೆ ನಡೆಸಲಾಯಿತು.

ದೇವಸ್ಥಾನಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುವುದು, ದೇವಸ್ಥಾನದ ಭದ್ರತೆ ದೃಷ್ಟಿಯಿಂದ ಸಿಸಿ ಕ್ಯಾಮೆರಾ ವ್ಯವಸ್ಥೆ ಕಲ್ಪಿಸುವುದು ಹಾಗೂ ಸ್ವಚ್ಛತೆ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಬೈರಮುಡಿ ಸುಬ್ರಾಯ್ ಗೌಡ, ಉಪಾಧ್ಯಕ್ಷರಾದ ಯೋಗೇಂದ್ರ, ರಕ್ಷಣಾ ವೇದಿಕೆ ಕಾರ್ಮಿಕ ಘಟಕದ ತಾಲೂಕು ಅಧ್ಯಕ್ಷರು ಹಾಗೂ ದೇವಸ್ಥಾನ ಕಮಿಟಿ ಸದಸ್ಯರಾದ ಸಂಗ್ರಾಮ್ ಹೂಡಚಳ್ಳಿ, ಆದರ್ಶ ನೆಲಗಳ್ಳಿ, ಸುನಿಲ್ ದೇವಲಕೆರೆ, ಸಂದೇಶ್ ಸೇರಿದಂತೆ ದೇವಸ್ಥಾನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವಂತೆ ಸಂಬಂಧಪಟ್ಟವರಿಗೆ ಮನವಿ ಮಾಡಲಾಯಿತು. ಭಕ್ತರ ಅನುಕೂಲ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕಾರ್ಯಯೋಜನೆಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *