
ಸಕಲೇಶಪುರ : ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯ ಮಹತ್ವದ ಕುರಿತು ಪಕ್ಷದ ಸಂಪನ್ಮೂಲ ವ್ಯಕ್ತಿಯಾದ ದೇವರಾಜ್ ಅವರು ಸಭೆಯಲ್ಲಿ ಮಾಹಿತಿ ನೀಡಿದರು.
ಬಿಎಲ್‌ಎ-2 ಕಾರ್ಯಕರ್ತರ ಕರ್ತವ್ಯಗಳು, ಜವಾಬ್ದಾರಿಗಳು ಹಾಗೂ ಅರ್ಹ ಮತದಾರರ ಹೆಸರು ಸೇರ್ಪಡೆ, ಅಗತ್ಯ ತಿದ್ದುಪಡಿಗಳು ಮತ್ತು ಮತದಾರರ ಪಟ್ಟಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವ ಬಗ್ಗೆ ವಿವರವಾಗಿ ತಿಳಿಸಿದರು
ಇಂತಹ ಕಾರ್ಯಾಗಾರಗಳು ಪಕ್ಷದ ಸಂಘಟನೆಯನ್ನು ಬಲಪಡಿಸುವುದರ ಜೊತೆಗೆ ಮುಂಬರುವ ಚುನಾವಣೆಗಳಿಗೆ ಪಕ್ಷವನ್ನು ಇನ್ನಷ್ಟು ಸಜ್ಜುಗೊಳಿಸಲು ಸಹಕಾರಿಯಾಗಲಿವೆ ಎಂದು ತಿಳಿಸಿದರು .
ಪಕ್ಷದ ಕಾರ್ಯಕರ್ತರು ತಳಮಟ್ಟದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಮೂಲಕ ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸಬೇಕೆಂದು ಕರೆ ನೀಡಿದರು
ಈ ಸಂದರ್ಭದಲ್ಲಿ ಸಕಲೇಶಪುರ ಬಿಎಲ್‌ಎ-1 ಕಾಡಪ್ಪ ಅವರು, ಸಕಲೇಶಪುರ ತಾಲೂಕು ಅಧ್ಯಕ್ಷರಾದ ಸ್ವಾಮಿಗೌಡ, ಆಲೂರು ತಾಲೂಕು ಅಧ್ಯಕ್ಷರಾದ ಕೆ.ಎಸ್. ಮಂಜೇಗೌಡ, ಹಾಸನ ತಾಲೂಕು ಅಧ್ಯಕ್ಷರಾದ ಎಸ್. ದೇವೇಗೌಡ, ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷರಾದ ಬೆಕ್ಕನಹಳ್ಳಿ ನಾಗರಾಜು, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಚಂಚಲ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಮುಖಂಡರು, ಬೂತ್ ಮಟ್ಟದ ಕಾರ್ಯಕರ್ತರು ಹಾಗೂ ಬಿಎಲ್‌ಎ ಗಳು ಉಪಸ್ಥಿತರಿದ್ದರು.
