ಅರಕಲಗೂಡು : ಪಟ್ಟಣದ ಬಸವೇಶ್ವರ ಸಮುದಾಯ ಭವನದಲ್ಲಿ ಶನಿವಾರ ನಡೆದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಹಾಗೂ ತಾಲೂಕು ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಶೈಕ್ಷಣಿಕ, ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಸಮುದಾಯಕ್ಕೆ ಸೂಕ್ತ ಸ್ಥಾನಮಾನ ದೊರೆಯಲು ಸಂಘಟಿತ ಹೋರಾಟ ಅಗತ್ಯವಾಗಿದೆ ಎಂದರು.

ಜಿಲ್ಲೆಯಲ್ಲಿ ಒಬ್ಬ ಶಾಸಕರನ್ನೂ ಆಯ್ಕೆ ಮಾಡಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂಬುದನ್ನು ಉದಾಹರಿಸಿದ ಅವರು, ಬಗರ್ ಹುಕುಂ ಸಾಗುವಳಿ ಜಮೀನು ಹಂಚಿಕೆ ವಿಚಾರದಲ್ಲಿ ಅಧಿಕಾರಿಗಳ ಪಾತ್ರವಿದೆ ಎಂದು ಹೇಳಿದರು. ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದಿರುವ ಕ್ರಮ ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಜಿಲ್ಲೆಯ ಬಹುಸಂಖ್ಯಾತ ಸಮುದಾಯಕ್ಕೆ ರಕ್ಷಣೆ ಇಲ್ಲದಂತಾಗಿರುವುದು ದುರದೃಷ್ಟಕರ ಸಂಗತಿ ಎಂದು ಮಹಾಸಭಾ ಖಂಡಿಸುತ್ತದೆ ಎಂದರು.

ಮಹಾಸಭಾ ರಾಷ್ಟ್ರೀಯ ಮಹಿಳಾ ಘಟಕದ ಬಿ.ಕೆ. ಚಂದ್ರಕಲಾ ಮಾತನಾಡಿ, ಸಂಘಟನೆಗೆ ರಾಜಕೀಯ ಸೋಂಕು ತಟ್ಟದಂತೆ ನೋಡಿಕೊಳ್ಳಬೇಕು. ವೀರಶೈವ ಲಿಂಗಾಯತ ಮಹಾಸಭೆಯಂತಹ ದೊಡ್ಡ ಸಂಘಟನೆಗೆ ಕಪ್ಪು ಚುಕ್ಕೆ ಬಾರದಂತೆ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಅಧ್ಯಕ್ಷ ನವಿಲೆ ಪರಮೇಶ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಜಿಲ್ಲಾ ಉಪಾಧ್ಯಕ್ಷ ಎ.ಬಿ. ಗುರುಸಿದ್ದೇಶ್, ಸುರೇಶ್, ಬೋರೆಹಳ್ಳಿ ಸೋಮಶೇಖರ್, ಪುನೀತ್ ಪಟೇಲ್, ಹಾಸನ ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್ ಸೇರಿದಂತೆ ಜಿಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ವಿವಿಧ ತಾಲೂಕುಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಅರಸೀಕೆರೆ ಘಟಕದ ಅಧ್ಯಕ್ಷ ಶೇಖರ್ ಸಂಕೋಡನಹಳ್ಳಿ, ಸಕಲೇಶಪುರದ ದಿನೇಶ್, ಹೊಳೆನರಸೀಪುರದ ರಾಜಶೇಖರ್, ಎಸ್.ಎಂ.ಎಸ್. ಕುಮಾರ್, ಅಜ್ಜನಹಳ್ಳಿ ಚಂದ್ರಶೇಖರ್, ಅನಿಲ್ ಕುಮಾರ್, ಜಗದೀಶ್ ಸೇರಿದಂತೆ ಹಲವು ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *