ಸಕಲೇಶಪುರ : ಕರ್ನಾಟಕ ಪಬ್ಲಿಕ್ ಶಾಲೆ, ಹೆತ್ತೂರಿನಲ್ಲಿ12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅತ್ಯಂತ ಸಂಭ್ರಮ ಹಾಗೂ ಉತ್ಸಾಹದಿಂದ ಆಚರಿಸಲಾಯಿತು.

ಯೋಗ ತರಬೇತಿದಾರರಾದ ಬೆಂಗಳೂರಿನ ದೇವನಹಳ್ಳಿಯ ಶ್ರೀಯುತ ಸುರೇಶ್ ಅವರು ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಧ್ಯಾನ ವಿಧಾನಗಳ ಬಗ್ಗೆ ತರಬೇತಿ ನೀಡಿದರು. ಯೋಗದ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಹಿರಿಯ ಯೋಗಪಟುವಾದ ಶ್ರೀಮತಿ ಜಾಜಮ್ಮ ಹೆತ್ತೂರು, ಶ್ರೀಯುತ ಪ್ರಕಾಶ್ ದೇವನಹಳ್ಳಿ, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾದ ಹರೀಶ್ ಕರಡಿಗಾಲ, ಮಾಜಿ ಅಧ್ಯಕ್ಷರಾದ ಸಚಿನ್ ಹೆತ್ತೂರು, ಕೆ.ಪಿ.ಎಸ್. ಪ್ರಾಂಶುಪಾಲರಾದ ಮಂಜುನಾಥ ಬಿ.ಡಿ., ಉಪ ಪ್ರಾಂಶುಪಾಲರಾದ ಭಾಸ್ಕರ್ ಬಿ., ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ಸತೀಶ್, ಶಿಕ್ಷಕ ವರ್ಗದವರು, ಸಿಬ್ಬಂದಿ ವರ್ಗದವರು, ಸ್ಥಳೀಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಯಶಸ್ಸಿಗೆ ಕಾರಣರಾದರು.

ಕಾರ್ಯಕ್ರಮವು ಯೋಗದ ಮಹತ್ವವನ್ನು ಸಾರುವುದರೊಂದಿಗೆ ಆರೋಗ್ಯಕರ ಜೀವನಶೈಲಿಯ ಬಗ್ಗೆ ಅರಿವು ಮೂಡಿಸಿತು.

🧘‍♀️ “ಯೋಗವು ದೇಹ, ಮನಸ್ಸು ಮತ್ತು ಆತ್ಮದ ಸಮನ್ವಯದ ಮಾರ್ಗವಾಗಿದೆ ಎಂದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *