ಸಕಲೇಶಪುರ :- ತಾಲೂಕಿನ ಕುರಭತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶುಕ್ರವಾರ ಸಂತೆಯಲ್ಲಿರುವ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಶಾಲೆಯ ವಿದ್ಯಾರ್ಥಿಗಳಿಗೆ ಯೋಗದ ಮಹತ್ವ, ದೈಹಿಕ ಆರೋಗ್ಯ ಮತ್ತು ಮಾನಸಿಕ ನೆಮ್ಮದಿಗೆ ಯೋಗಾಭ್ಯಾಸದ ಅಗತ್ಯತೆ ಕುರಿತು ಶಿಕ್ಷಕರು ಮಾಹಿತಿ ನೀಡಿದರು.ನಂತರ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳು ಸಾಮೂಹಿಕವಾಗಿ ವಿವಿಧ ಯೋಗಾಸನಗಳನ್ನು ಮಾಡುವ ಮೂಲಕ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ರತಾಪ್, ಸಹ ಶಿಕ್ಷಕರಾದ ಜೀವನ್ ಹಾಗೂ ಶಾಲೆಯ ಎಲ್ಲಾ ಸಹ ಶಿಕ್ಷಕರು, ಆಡಳಿತ ವರ್ಗದವರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಯೋಗವು ಆರೋಗ್ಯಕರ ಜೀವನಶೈಲಿಗೆ ದಾರಿ ತೋರಿಸುವ ಮಹತ್ವದ ಅಭ್ಯಾಸವಾಗಿದ್ದು, ವಿದ್ಯಾರ್ಥಿಗಳಲ್ಲಿ ಯೋಗದ ಬಗ್ಗೆ ಆಸಕ್ತಿ ಮೂಡಿಸುವ ನಿಟ್ಟಿನಲ್ಲಿ ಶಾಲೆಯಲ್ಲಿ ನಡೆದ ಕಾರ್ಯಕ್ರಮ ಮೆಚ್ಚುಗೆಗೆ ಪಾತ್ರವಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *