
ಸಕಲೇಶಪುರ : ತಾಲ್ಲೂಕಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಯವರು ಇಂದು ಸಕಲೇಶಪುರದ ಶಿರಾಡಿ ಘಾಟ್ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದರು. ಈ ವೇಳೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಮುರಳಿ ಮೋಹನ್ ಇದ್ದರು. ಹೆದ್ದಾರಿ ಅಧಿಕಾರಿಗಳು ಲೋಕೋಪಯೋಗಿ ಸಚಿವರಿಗೆ ರಸ್ತೆ ಕಾಮಗಾರಿಯ ಬಗ್ಗೆ ವಿವರಿಸಿ ಕಾಮಗಾರಿಯ ಗುಣಮಟ್ಟದ ಬಗ್ಗೆ ವಿವರ ನೀಡಿದರು.


