
ಸಕಲೇಶಪುರ.ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮಹೇಶ್ ಜೆ ಇ ಹಾಗೂ ಅನುರಾಧರವರ ಪುತ್ರ ಹರ್ಷಿತ್ ಜೆ ಎಮ್ ಅವರು ರಾಯಚೂರು ವೈದ್ಯಕೀಯ ಮಹಾವಿದ್ಯಾಲಯದಲ್ಲಿ (RIMS) ತಮ್ಮ ಎಂಬಿಬಿಎಸ್ (MBBS) ಪದವಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.
ಬಾಲ್ಯದಿಂದಲೂ ಓದಿನಲ್ಲಿ ಅಪಾರ ಆಸಕ್ತಿ ಹೊಂದಿದ್ದ ಹರ್ಷಿತ್ ರವರು, ಕಠಿಣ ಪರಿಶ್ರಮ ಮತ್ತು ಛಲದಿಂದ ವೈದ್ಯಕೀಯ ಶಿಕ್ಷಣವನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.
ಸಾರ್ವಜನಿಕ ಸೇವೆಯಲ್ಲಿರುವ ತಂದೆಯ ಮಾರ್ಗದರ್ಶನ ಮತ್ತು ಕುಟುಂಬದವರ ನಿರಂತರ ಪ್ರೋತ್ಸಾಹದೊಂದಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವುದು ಶ್ಲಾಘನೀಯ.
ಹರ್ಷೀತ್ ಅವರ ಈ ಯಶಸ್ಸಿಗೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು, ಸ್ಥಳೀಯ ಗಣ್ಯರು ಮತ್ತು ಸ್ನೇಹಿತರು ಹರ್ಷ ವ್ಯಕ್ತಪಡಿಸಿದ್ದಾರೆ.
ಭವಿಷ್ಯದಲ್ಲಿ ಅವರು ಸಮರ್ಥ ವೈದ್ಯರಾಗಿ ಸೇವೆ ಸಲ್ಲಿಸಿ, ಸಮಾಜಕ್ಕೆ ದೊಡ್ಡ ಕೊಡುಗೆ ನೀಡಲಿ ಎಂದು ಆಪ್ತರು ಹಾಗೂ ಹಿತೈಷಿಗಳು ಶುಭ ಹಾರೈಸಿದ್ದಾರೆ.
