ಕಡಬ ತಾಲೂಕಿನ ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ಕುಮಾರಧಾರ ನದಿಗೆ ವ್ಯಕ್ತಿಯೊಬ್ಬ ಜಿಗಿದಿರುವ ಶಂಕೆ ವ್ಯಕ್ತವಾಗಿದೆ.

ಸಕಲೇಶಪುರ ಬಾಳೆಗದ್ದೆ ನಿವಾಸಿ ಧರ್ಮಯ್ಯ (40) ಎಂಬುವರು ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ನದಿ ಬದಿಯಲ್ಲಿ ಧರ್ಮಯ್ಯ ಅವರ ಶೂ ಪತ್ತೆಯಾಗಿದೆ.

ಘಟನಾ ಸ್ಥಳಕ್ಜೆ ಕಡಬ ಪೋಲಿಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಡಬ ಪೊಲೀಸರು, ಶೌರ್ಯ ತಂಡದ ಸದಸ್ಯರಿಂದ ನದಿಯಲ್ಲಿ ಹುಡುಕಾಟ ನಡೆದಿದೆ. ಧರ್ಮಯ್ಯ ರಬ್ಬರ್ ಕಟ್ಟಿಂಗ್ ಕೆಲಸಕ್ಕೆ ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದರು ಎನ್ನಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *