ಆಲೂರು : ಪಟ್ಟಣದ ಅಂಬೇಡ್ಕರ್ ಭವನದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ನಿರಂತರವಾಗಿ ಮುಂದುವರಿಯಲಿದ್ದು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಯೋಜನೆಗಳ ಸೌಲಭ್ಯಗಳನ್ನು ಪಡೆಯುತ್ತಿರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ನಿರಂತರವಾಗಿ ಮುಂದುವರೆಯಲಿದೆ ಎಂದರು.

ಸರ್ಕಾರದ ಮಹತ್ವಕಾಂಕ್ಷಿಯ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಮಾರ್ಚ್ ತಿಂಗಳವರೆಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ಹಣ ಸಂದಾಯ ಮಾಡಲಾಗಿದೆ, ಎರಡು ತಿಂಗಳ ಬಾಕಿ ಹಣ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದರು.

ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಯ ಲಾಭ ಪಡೆಯಲು ಮನೆ ಮನೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದ್ದು ಅರ್ಹರಿಗೆ ಯೋಜನೆಯ ಲಾಭ ತಲುಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಶಕ್ತಿ ಯೋಜನೆಯಡಿಯಲ್ಲಿ ತಾಲೂಕಿಗೆ 550 ಟ್ರಿಪ್ ಗಳ ಪ್ರಯೋಜನವನ್ನು ಮಹಿಳೆಯರು ಹಾಗೂ ವಿದ್ಯಾರ್ಥಿನಿಯರು ಪಡೆಯುತ್ತಿದ್ದು, ಇದೀಗ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ನೀಡಲಾಗಿದೆ.

ಈಗಾಗಲೇ ವಿದ್ಯಾರ್ಥಿ ಬಸ್ ಪಾಸ್ ಪಡೆದವರು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದಲ್ಲಿ ಹಣ ಮರುಪಾವತಿ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು.

ಸಭೆಯಲ್ಲಿ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪೃಥ್ವಿ ಜಯರಾಮ್, ಸದಸ್ಯರಾದ ರುದ್ರ ಕುಮಾರ್, ಮಧು ಅಬ್ಬನ, ಯೋಗೇಶ್, ತಾಲೂಕು ಪಂಚಾಯತಿ ಕಾರ್ಯ ನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಶರ್ಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಡಿಪಿಓ ದಿನೇಶ್, ಆಹಾರ ಇಲಾಖೆ ಶಿರಸ್ತೆದಾರ್ ಮೋಹನ್ ಕುಮಾರ್, ಕೌಶಲ್ಯಾಭಿವೃದ್ಧಿ ಇಲಾಖಾ ಧಿಕಾರಿ ವಿಜಯ ಲಕ್ಷ್ಮೀ ಭಾಗವಹಿಸಿದ್ದರು..

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *