ಸಕಲೇಶಪುರ : ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ ವತಿಯಿಂದ ಸಸ್ಯ ಸಂರಕ್ಷಣೆ ಯೋಜನೆಯಡಿ ರೈತರಿಗೆ ಸುರಕ್ಷಿತ ಕೀಟನಾಶಕ ಬಳಕೆ ಹಾಗೂ ನೈಸರ್ಗಿಕ ಕೃಷಿ ಕುರಿತು ವಿಶೇಷ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮಾಹಿತಿ ನೀಡುವವರು: ಕೇಶವಮೂರ್ತಿಕೃಷಿ ಇಲಾಖೆ, ಹೆತ್ತೂರು ಹಾಗೂ ಯಸಳೂರು

ದಿನಾಂಕ: 10-07-2026 (ಶುಕ್ರವಾರ) ಸಮಯ: ಬೆಳಿಗ್ಗೆ 10.00 ಗಂಟೆಗೆ ಸ್ಥಳ: ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದ ಕಚೇರಿ

ಈ ಕಾರ್ಯಕ್ರಮದಲ್ಲಿ ಸುರಕ್ಷಿತ ಕೀಟನಾಶಕ ಬಳಕೆಯ ವಿಧಾನಗಳು, ನೈಸರ್ಗಿಕ ಕೃಷಿಯ ಮಹತ್ವ, ಬೆಳೆ ಸಂರಕ್ಷಣೆ ಹಾಗೂ ರೈತರಿಗೆ ಉಪಯುಕ್ತವಾದ ಹಲವು ಕೃಷಿ ಮಾಹಿತಿಗಳನ್ನು ನೀಡಲಾಗುವುದು.ಆದ್ದರಿಂದ ವಳಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ರೈತರು, ಬೆಳೆಗಾರರು, ಸಂಘದ ಪದಾಧಿಕಾರಿಗಳು ಹಾಗೂ ನಿರ್ದೇಶಕರು ತಪ್ಪದೇ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಆತ್ಮೀಯವಾಗಿ ವಿನಂತಿಸಿಕೊಳ್ಳುತ್ತೇವೆ.

ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸೋಣ.

ಅಧ್ಯಕ್ಷರು ಹಾಗೂ ಕಾರ್ಯದರ್ಶಿವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed