ಸಕಲೇಶಪುರ : ಮಲೆನಾಡು ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮಲೆನಾಡು ರಕ್ಷಣಾ ಸೇನೆ ವತಿಯಿಂದ ತುರ್ತು ಸಂದರ್ಭಗಳಲ್ಲಿ ಉಚಿತ ಆಂಬುಲೆನ್ಸ್ ಸೇವೆ ಆರಂಭಿಸಲಾಗಿದೆ.

ಮಳೆಯಿಂದಾಗಿ ರಸ್ತೆ ಕುಸಿತ, ಭೂಕುಸಿತ, ಮರಗಳು ಉರುಳುವುದು, ಅಪಘಾತಗಳು ಹಾಗೂ ಇತರೆ ತುರ್ತು ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರಿಗೆ ಅಗತ್ಯ ಸಮಯದಲ್ಲಿ ತಕ್ಷಣ ನೆರವು ಒದಗಿಸುವ ಉದ್ದೇಶದಿಂದ ಈ ಸೇವೆಯನ್ನು ಕಲ್ಪಿಸಲಾಗಿದೆ.

ಯಾವುದೇ ಅನಾಹುತ ಸಂಭವಿಸಿದರೆ ಅಥವಾ ತುರ್ತು ವೈದ್ಯಕೀಯ ನೆರವು ಅಗತ್ಯವಿದ್ದಲ್ಲಿ ಸಾರ್ವಜನಿಕರು ಯಾವುದೇ ಹಿಂಜರಿಕೆಯಿಲ್ಲದೆ ಕೆಳಕಂಡ ದೂರವಾಣಿ ಸಂಖ್ಯೆಗಳಿಗೆ ಸಂಪರ್ಕಿಸಿ ಉಚಿತ ಆಂಬುಲೆನ್ಸ್ ಸೇವೆಯ ಪ್ರಯೋಜನ ಪಡೆಯಬಹುದು ಎಂದು ಮಲೆನಾಡು ರಕ್ಷಣಾ ಸೇನೆ ಮನವಿ ಮಾಡಿದೆ.

ಸಂಪರ್ಕ ಸಂಖ್ಯೆ:

📲 96111 42656 📲91482 45291 📲78921 04291

ಮಳೆಗಾಲದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಅಪಾಯದ ಪ್ರದೇಶಗಳಿಗೆ ತೆರಳದೇ ಎಚ್ಚರಿಕೆ ವಹಿಸುವಂತೆ ಹಾಗೂ ತುರ್ತು ಸಂದರ್ಭಗಳಲ್ಲಿ ಈ ಉಚಿತ ಸೇವೆಯನ್ನು ಸದುಪಯೋಗಪಡಿಸಿಕೊಳ್ಳುವಂತೆ ಮಲೆನಾಡು ರಕ್ಷಣಾ ಸೇನೆ ಪ್ರಕಟಣೆಯಲ್ಲಿ ತಿಳಿಸಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed