ಸಕಲೇಶಪುರ: ಮಾಜಿ ಸಚಿವ ಎಚ್. ಕೆ. ಕುಮಾರಸ್ವಾಮಿ ಅವರು ಚಂಗಡಹಳ್ಳಿ, ಕೂಡು ರಸ್ತೆ ಹಾಗೂ ಹೆತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್ ಪಕ್ಷದ ಬಿ.ಎಲ್.ಒಗಳು, ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಎಸ್‌ಐಆರ್ (Special Intensive Revision) ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆ, ಬಿ.ಎಲ್.ಒಗಳ ಜವಾಬ್ದಾರಿಗಳು ಹಾಗೂ ಪಕ್ಷದ ಸಂಘಟನೆ ಬಲಪಡಿಸುವ ಕುರಿತು ಕಾರ್ಯಕರ್ತರೊಂದಿಗೆ ಚರ್ಚಿಸಿ ಅಗತ್ಯ ಮಾರ್ಗದರ್ಶನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷ ಬೆಕ್ಕನಹಳ್ಳಿ ನಾಗರಾಜ್, ಕೃಷಿ ಪ್ರಾಥಮಿಕ ಸಹಕಾರ ಸಂಘದ ಅಧ್ಯಕ್ಷರಾದ ನಾಗಭೂಷಣ್ ಹಾಗೂ ಕೌಶಿಕ್, ವಣಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಹೇಮಂತ್ ಕುಮಾರ್, ಮುಖಂಡರಾದ ಸುದರ್ಶನ್, ದಿವಾಕರ್, ಕುಶಾಲಪ್ಪ, ಕೃಷ್ಣಪ್ಪ, ಕೃಷ್ಣಪ್ರಸಾದ್, ಕೆ.ಬಿ. ಮಲ್ಲೇಶ್, ಸತೀಶ್ ಸೇರಿದಂತೆ ಪಕ್ಷದ ಮುಖಂಡರು, ಬಿ.ಎಲ್.ಒಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed