ಸಕಲೇಶಪುರ: ತಾಲ್ಲೂಕಿನ ಯಸಳೂರು, ಹೊಸೂರು ಹಾಗೂ ಉಚ್ಚಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜನತಾ ದಳ (ಎಸ್) ಪಕ್ಷದಿಂದ ನೇಮಕಗೊಂಡಿರುವ ಬಿ.ಎಲ್.ಎ.-2ರ ಸಭೆ ಮಾಜಿ ಸಚಿವ ಹೆಚ್.ಕೆ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯಿತು.

ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR – Special Intensive Revision) ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸಲು ಈಗಾಗಲೇ ಕರ್ತವ್ಯ ನಿರ್ವಹಿಸುತ್ತಿರುವ ಬಿ.ಎಲ್.ಒ. ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಕ್ಷೇತ್ರದ ಪ್ರತಿಯೊಬ್ಬ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವಂತೆ ಅಗತ್ಯ ಸಹಕಾರ ನೀಡುವ ಜವಾಬ್ದಾರಿ ಬಿ.ಎಲ್.ಎ.-2ರ ಮೇಲಿದೆ ಎಂದು ತಿಳಿಸಿದರು.ವಿಧಾನಸಭಾ ಕ್ಷೇತ್ರದ ವತಿಯಿಂದ ನೇಮಕಗೊಂಡಿರುವ ಬಿ.ಎಲ್.ಎ. ಕಾಡಪ್ಪ ಅವರು ಮಾತನಾಡಿ, ಎಸ್.ಐ.ಆರ್. ಪ್ರಕ್ರಿಯೆಯ ಮಹತ್ವ, ಬಿ.ಎಲ್.ಎ.-2ರ ಕರ್ತವ್ಯಗಳು ಹಾಗೂ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಬಿ.ಎಲ್.ಎ.-2ರಿಗೆ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯವನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವಂತೆ ಕರೆ ನೀಡಲಾಯಿತು.

ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಸುದರ್ಶನ್ ಹೆತ್ತೂರು, ಎಲ್.ಎಸ್. ತಮ್ಮೇಗೌಡ, ಟಿಎಪಿಎಂಸಿ ನಿರ್ದೇಶಕ ರಮೇಶ್ ಕರಗೂರು, ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರದೀಪ್ ಕೋವಳ್ಳಿ, ಉಚ್ಚಂಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ತಾರಾ ಹಾಗೂ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *