
ಹಾಸನ: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಚಿಸಲಾಗಿರುವ ಹಾಸನ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ನೂತನ ಅಧ್ಯಕ್ಷರಾಗಿ ಜಿಲ್ಲೆಯ ಯುವ ನಾಯಕ ರಂಜಿತ್ ಗೊರೂರು ಅವರನ್ನು ನೇಮಕ ಮಾಡಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಈ ಮೂಲಕ ರಾಜ್ಯದಲ್ಲೇ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅತ್ಯಂತ ಕಿರಿಯ ವಯಸ್ಸಿನ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ರಂಜಿತ್ ಗೊರೂರು ಅವರು ಹಾಸನ ಜಿಲ್ಲೆಗೆ ಹೆಮ್ಮೆ ತಂದಿದ್ದಾರೆ.
ಹಲವು ದಿನಗಳ ಕುತೂಹಲಕ್ಕೆ ತೆರೆರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಗ್ಯಾರಂಟಿ ಯೋಜನೆಗಳು ಜಾರಿಗೆ ಬಂದಿದ್ದರೂ, ಹಾಸನ ಜಿಲ್ಲೆಯ ಸಮಿತಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಬಾಕಿ ಉಳಿದಿತ್ತು. ಸಮಿತಿಗೆ ಹೊಸ ಸಾರಥಿಯ ಆಯ್ಕೆ ಕುರಿತು ಜಿಲ್ಲಾ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿತ್ತು. ಇದೀಗ ಯುವ ನಾಯಕನಿಗೆ ಮಣೆ ಹಾಕುವ ಮೂಲಕ ಸರ್ಕಾರ ಈ ಕುತೂಹಲಕ್ಕೆ ತೆರೆ ಎಳೆದಿದೆ.
