ಅರೇಹಳ್ಳಿ:ಬೇಲೂರು ತಾಲೂಕಿನ ಅರೇಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025-26ನೇ ಸಾಲಿನ 76ನೇ ವಾರ್ಷಿಕ ಮಹಾಸಭೆಯು ಜುಲೈ 21ರಂದು ಬೆಳಿಗ್ಗೆ 10.30ಕ್ಕೆ ಅರೇಹಳ್ಳಿಯ ವಿನಾಯಕ ಸಮುದಾಯ ಭವನದಲ್ಲಿ ನಡೆಯಲಿದೆ.ಕಾರ್ಯಕ್ರಮವನ್ನು ಹಾಸನ ಜಿಲ್ಲಾ ಸಹಕಾರ ಕೇಂದ್ರದ ಅಧ್ಯಕ್ಷ ಸೋಮನಹಳ್ಳಿ ನಾಗರಾಜು ಉದ್ಘಾಟಿಸಲಿದ್ದಾರೆ.

ಹಾಸನ ಜಿಲ್ಲಾ ಸಹಕಾರ ಕೇಂದ್ರದ ನಿರ್ದೇಶಕ ನಾಗರಾಜು ಎಂ.ಎ. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನಾಗೇಶ್ ಶೆಟ್ಟಿ ವಹಿಸಲಿದ್ದಾರೆ.

ವಾರ್ಷಿಕ ಮಹಾಸಭೆಯಲ್ಲಿ ಸಂಘದ 2025-26ನೇ ಸಾಲಿನ ಆಡಳಿತ ವರದಿ, ಲೆಕ್ಕಪತ್ರಗಳು, ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಸದಸ್ಯರ ಹಿತಾಸಕ್ತಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಚರ್ಚಿಸಿ ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಆದ್ದರಿಂದ ಸಂಘದ ಎಲ್ಲಾ ಸದಸ್ಯರು, ನಿರ್ದೇಶಕರು ಹಾಗೂ ಸಹಕಾರ ಕ್ಷೇತ್ರದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ವಾರ್ಷಿಕ ಮಹಾಸಭೆಯನ್ನು ಯಶಸ್ವಿಗೊಳಿಸುವಂತೆ ಸಂಘದ ಅಧ್ಯಕ್ಷ ನಾಗೇಶ್ ಶೆಟ್ಟಿ ಮನವಿ ಮಾಡಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *