ಸಕಲೇಶಪುರ: ಸಕಲೇಶಪುರ ವಲಯ ವ್ಯಾಪ್ತಿಯ ಸುಂಡೆಕೆರೆ ಎಸ್ಟೇಟ್ ಭಾಗದಲ್ಲಿ ಒಂಟಿ ಕಾಡಾನೆಯ ಸಂಚಾರ ಕಂಡುಬಂದಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ.ಒಂಟಿ ಕಾಡಾನೆ ಸುಂಡೆಕೆರೆ ಎಸ್ಟೇಟ್ ಕಡೆಗೆ ಚಲಿಸುತ್ತಿರುವ ಮಾಹಿತಿ ಲಭ್ಯವಾಗುತ್ತಿದ್ದಂತೆಯೇ ಸಕಲೇಶಪುರ ವಲಯ ಅರಣ್ಯಾಧಿಕಾರಿಗಳು ಇಲಾಖೆಯ ಸಿಬ್ಬಂದಿಗೆ ತಕ್ಷಣವೇ ಸ್ಥಳಕ್ಕೆ ತೆರಳಿ ಶೋಧ ಕಾರ್ಯ (ಸರ್ಚ್) ನಡೆಸುವಂತೆ ಸೂಚನೆ ನೀಡಿದ್ದಾರೆ.

ಕಾಡಾನೆಯ ನಿಖರ ಚಲನವಲನವನ್ನು ನಿರಂತರವಾಗಿ ಗಮನಿಸಿ, ಸಮೀಪದ ಗ್ರಾಮಗಳ ನಿವಾಸಿಗಳು ಹಾಗೂ ತೋಟದ ಕಾರ್ಮಿಕರಿಗೆ ಕೂಡಲೇ ಮಾಹಿತಿ ನೀಡುವಂತೆ ನಿರ್ದೇಶನ ನೀಡಿದ್ದಾರೆ.ಈ ಸಂದರ್ಭದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಕಾಡಾನೆ ಇರುವ ಪ್ರದೇಶಕ್ಕೆ ತೆರಳಬಾರದು. ಕಾಫಿ ತೋಟ, ಅರಣ್ಯ ಪ್ರದೇಶ ಹಾಗೂ ಎಸ್ಟೇಟ್‌ಗಳಿಗೆ ತೆರಳುವ ಮುನ್ನ ಅರಣ್ಯ ಇಲಾಖೆಯಿಂದ ಮಾಹಿತಿ ಪಡೆದು ಮಾತ್ರ ತೆರಳಬೇಕು ಎಂದು ಮನವಿ ಮಾಡಲಾಗಿದೆ.

ಅಲ್ಲದೆ, ಕಾಡಾನೆ ಕಂಡುಬಂದರೆ ಅದರ ಸಮೀಪಕ್ಕೆ ಹೋಗಲು ಅಥವಾ ಕಿರಿಕಿರಿ ಉಂಟುಮಾಡಲು ಪ್ರಯತ್ನಿಸದೆ ಸುರಕ್ಷಿತ ಅಂತರ ಕಾಯ್ದುಕೊಂಡು ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ಕಾಡಾನೆಯ ಚಲನವಲನದ ಮೇಲೆ ಅರಣ್ಯ ಇಲಾಖೆ ನಿರಂತರ ನಿಗಾ ವಹಿಸಿದ್ದು, ಸಾರ್ವಜನಿಕರು ಇಲಾಖೆಯ ಸೂಚನೆಗಳನ್ನು ಪಾಲಿಸಿ ಎಚ್ಚರಿಕೆಯಿಂದ ಇರಬೇಕು ಎಂದು ಸಕಲೇಶಪುರ ವಲಯ ಅರಣ್ಯಾಧಿಕಾರಿ ಹೇಮಂತ್ ಕುಮಾರ್ ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *