
ಸಕಲೇಶಪುರ, ಜು.24: ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡ ಅವರ ಧರ್ಮಪತ್ನಿ ದಿವಂಗತ ಶ್ರೀಮತಿ ಚೆನ್ನಮ್ಮ ದೇವೇಗೌಡರ ಸ್ಮರಣಾರ್ಥ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜುಲೈ 25ರಂದು (ಶನಿವಾರ) ಬೆಳಿಗ್ಗೆ 10.30ಕ್ಕೆ ಸಕಲೇಶಪುರ ಪಟ್ಟಣದ ಒಕ್ಕಲಿಗರ ಸಮುದಾಯ ಭವನದಲ್ಲಿ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಪಕ್ಷಾತೀತವಾಗಿ, ಜಾತ್ಯಾತೀತವಾಗಿ ಹಾಗೂ ಎಚ್.ಡಿ. ದೇವೇಗೌಡ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ದಿವಂಗತ ಚೆನ್ನಮ್ಮ ದೇವೇಗೌಡರಿಗೆ ಗೌರವ ನಮನ ಸಲ್ಲಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮಾಜಿ ಸಚಿವರಾದ ಹೆಚ್.ಕೆ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಜಾತ್ಯಾತೀತ ಜನತಾದಳದ ಸಕಲೇಶಪುರ ತಾಲೂಕು ಅಧ್ಯಕ್ಷ ದೊಡ್ಡದಿಣ್ಣೆ ಸ್ವಾಮಿಗೌಡ ಅವರು ಸಹ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡರು, ಕಾರ್ಯಕರ್ತರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಗಣ್ಯರು ಭಾಗವಹಿಸುವ ನಿರೀಕ್ಷೆಯಿದೆ.
