
ಸಕಲೇಶಪುರ : ಪ್ರತಿ ವರ್ಷ ಜುಲೈ 26 ರಂದು ಆಚರಿಸಲಾಗುವ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮನ್ನು ಜುಲೈ 27 ರ ಇಂದು ಮಕ್ಕಳು ಸಾಮೂಹಿಕವಾಗಿ ಸೈನಿಕರ ಸಮವಸ್ತ್ರವನ್ನು ಧರಿಸುವ ಮೂಲಕ ರೋಟರಿ ಸಂಸ್ಥೆಯ ನರ್ಸರಿ ವಿಭಾಗದ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಸಮವಸ್ತ್ರದೊಂದಿಗೆ ಉತ್ಸಾಹದಿಂದ ಭಾಗವಹಿಸಿದ್ದರು.
1999 ರ ಕಾರ್ಗಿಲ್ ಯುದ್ಧದಲ್ಲಿ ಭಾರತೀಯ ಸೈನಿಕರ ಶೌರ್ಯ ಮತ್ತು ತ್ಯಾಗವನ್ನು ಗೌರವಿಸಲಾಗುತ್ತದೆ. ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮವನ್ನು ಪ್ರತಿ ವರ್ಷ ಮಕ್ಕಳಿಗೆ ಪರಿಚಯಿಸುವದೃಷ್ಟಿಯಿಂದ ಕಾರ್ಗಿಲ್ ವಿಜಯ್ ದಿವಸ್ , ಆಚರಿಸಲಾಗುತ್ತಿದ್ದು ಇದು ಭಾರತದ ಇತಿಹಾಸದಲ್ಲಿ ಮಹತ್ವದ ದಿನವಾಗಿದೆ ಎಂದು ಹೇಳಬಹುದಾಗಿದೆ.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಮಾಜಿ ಸೈನಿಕರುಗಳು ರೋಟರಿ ಶಾಲೆಯ ಪ್ರಾಂಶುಪಾಲ ರಾದ ಸುಮಂತ್ ಭಾರ್ಗವ್ , ರೋಟರಿ ಕ್ಲಬ್ ಅಧ್ಯಕ್ಷ ರವಿಕುಮಾರ್ ರೋಟರಿ ನರ್ಸರಿ ಶಾಲೆಯ ಮುಖ್ಯ ಶಿಕ್ಷಕಿ ಪೂಜಾ ಹಾಗೂ ಇತರ ಸಹ ಶಿಕ್ಷಕರು ಹಾಜರಿದ್ದರು.
