ಸಕಲೇಶಪುರ, ಆ.9: ತಾಲೂಕಿನ ಸತ್ತಿಗಾಲ್ ಗ್ರಾಮದ ಸುತ್ತಮುತ್ತ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ರೈತರು ಹಾಗೂ ತೋಟದ ಕಾರ್ಮಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಇತ್ತೀಚೆಗೆ ಸತ್ತಿಗಾಲ್ ಗ್ರಾಮದ ರೆಡ್ಡಿ ತೋಟದಲ್ಲಿ ಕಾಡಾನೆಗಳು ಕಾಣಿಸಿಕೊಂಡಿದ್ದವು. ಇದೀಗ ಕಾಡಾನೆಗಳು ಶಾಂತಪ್ಪ ಗೌಡ ಅವರ ತೋಟದತ್ತ ಬಂದಿರುವ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಸಕಲೇಶಪುರ ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸ್ಥಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ತೋಟದ ವ್ಯಾಪ್ತಿಯಲ್ಲಿ ಕಾಡಾನೆಗಳು ಕಂಡುಬಂದಿದ್ದು, ಅವುಗಳ ಚಲನವಲನದ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ನಿಗಾ ವಹಿಸಿದ್ದಾರೆ.

ಕಾಡಾನೆಗಳು ತೋಟಗಳ ಸಮೀಪದಲ್ಲೇ ಸಂಚರಿಸುತ್ತಿರುವ ಹಿನ್ನೆಲೆಯಲ್ಲಿ ತೋಟದ ಮಾಲೀಕರು, ರೈತರು, ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅರಣ್ಯಾಧಿಕಾರಿಗಳು ಸೂಚಿಸಿದರು.

ವಿಶೇಷವಾಗಿ ಬೆಳಗಿನ ಜಾವ ಹಾಗೂ ಸಂಜೆ ಸಮಯದಲ್ಲಿ ತೋಟಗಳಿಗೆ ತೆರಳುವಾಗ ಎಚ್ಚರಿಕೆಯಿಂದ ಇರಬೇಕು. ಒಂಟಿಯಾಗಿ ತೋಟಗಳಿಗೆ ತೆರಳದೆ ಗುಂಪಿನಲ್ಲಿ ಸಂಚರಿಸುವುದು, ಕಾಡಾನೆಗಳು ಕಂಡುಬಂದಲ್ಲಿ ಅವುಗಳನ್ನು ಹತ್ತಿರದಿಂದ ನೋಡಲು ಅಥವಾ ಓಡಿಸಲು ಪ್ರಯತ್ನಿಸದೆ ತಕ್ಷಣ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮುಂಜಾಗೃತಾ ಮಾಹಿತಿ ನೀಡಿದರು.

ಕಾಡಾನೆಗಳ ಚಲನವಲನ ಕಂಡುಬಂದಲ್ಲಿ ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡುವಂತೆ ಅಧಿಕಾರಿಗಳು ಗ್ರಾಮಸ್ಥರಿಗೆ ಮನವಿ ಮಾಡಿದ್ದು, ಸಾರ್ವಜನಿಕರ ಸುರಕ್ಷತೆಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಾಡಾನೆಗಳು ನಿರಂತರವಾಗಿ ತೋಟಗಳತ್ತ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ಹೆಚ್ಚಿಸಿ, ಅವುಗಳ ಚಲನವಲನದ ಮೇಲೆ ನಿಗಾ ವಹಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *