
ಸಕಲೇಶಪುರ: ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಅಕ್ರಮವಾಗಿ ಬಿಲ್ಲೆಟ್ಸ್‌ಗಳನ್ನು ಸಾಗಿಸುತ್ತಿದ್ದ ವಾಹನವನ್ನು ಸಕಲೇಶಪುರ ವಲಯ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.
ಮಾನ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಂತೆ ಸಕಲೇಶಪುರ ವಲಯದ ಬೆಳಗೋಡು ಶಾಖಾ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ KA 14 A 9018 ನೋಂದಣಿ ಸಂಖ್ಯೆಯ ವಾಹನದಲ್ಲಿ ಅಕ್ರಮವಾಗಿ ಬಿಲ್ಲೆಟ್ಸ್‌ಗಳನ್ನು ಸಾಗಿಸುತ್ತಿರುವುದು ಪತ್ತೆಯಾಗಿದೆ.
ಕೂಡಲೇ ಕಾರ್ಯಾಚರಣೆ ನಡೆಸಿದ ವಲಯ ಅರಣ್ಯಾಧಿಕಾರಿ ಎಚ್.ಆರ್. ಹೇಮಂತ್ ಕುಮಾರ್ ಹಾಗೂ ಸಿಬ್ಬಂದಿ ವಾಹನವನ್ನು ತಡೆದು ಪರಿಶೀಲನೆ ನಡೆಸಿದ್ದು, ಅಕ್ರಮವಾಗಿ ಸಾಗಿಸುತ್ತಿದ್ದ ಬಿಲ್ಲೆಟ್ಸ್‌ಗಳನ್ನು ಇಲಾಖಾ ಪರವಾಗಿ ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಅರಣ್ಯ ಮೊಕದ್ದಮೆ ಸಂಖ್ಯೆ 22/2026-27 ಅನ್ನು ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.ಅರಣ್ಯ ಸಂಪತ್ತನ್ನು ಅಕ್ರಮವಾಗಿ ಕಡಿದು ಸಾಗಿಸುವ ಹಾಗೂ ಅರಣ್ಯ ಉತ್ಪನ್ನಗಳನ್ನು ನಿಯಮಬಾಹಿರವಾಗಿ ಸಾಗಾಟ ಮಾಡುವವರ ವಿರುದ್ಧ ಅರಣ್ಯ ಇಲಾಖೆ ನಿರಂತರವಾಗಿ ನಿಗಾ ವಹಿಸಿದ್ದು, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿಗಳಾದ ಮಂಜುನಾಥ್, ಕೆ. ಮೋಹನ್ ಕುಮಾರ್, ಅರ್ಜುನ್, ಮಹದೇವಪ್ಪ, ಧನಂಜಯ್, ಗಸ್ತು ಅರಣ್ಯ ಪಾಲಕರಾದ ಉಮೇಶ್, ಕುಮಾರ್, ದೇವೇಂದ್ರ, ದೇವರಾಜ್, ಲೋಕೇಶ್, ಯೋಗೇಶ್, ಅರುಣ್ ಹಾಗೂ ಅರಣ್ಯ ವೀಕ್ಷಕರಾದ ಲೋಕೇಶ್, ಪೃಥ್ವಿರಾಜ್ ಸೇರಿದಂತೆ ಇನ್ನಿತರ ಸಿಬ್ಬಂದಿ ಭಾಗವಹಿಸಿದ್ದರು.
