ಚಿಕ್ಕಮತ್ತಿಘಟ್ಟ: ಕೃಷಿ ಹಾಗೂ ಪೂರಕ ಉದ್ಯಮಗಳಲ್ಲಿ ತೊಡಗಿಸಿಕೊಳ್ಳುವ ಗ್ರಾಮೀಣ ಯುವಕರಿಗೆ ಲಭ್ಯವಿರುವ ವಿವಿಧ ಆರ್ಥಿಕ ನೆರವು ಮತ್ತು ಪ್ರೋತ್ಸಾಹಕ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಚಿಕ್ಕಮತ್ತಿಘಟ್ಟ ಗ್ರಾಮದಲ್ಲಿ ಆಯೋಜಿಸಲಾಯಿತು.

ಗ್ರಾಮೀಣ ಯುವಕರ ಆರ್ಥಿಕ ಸಬಲೀಕರಣ, ಕೃಷಿ ಮತ್ತು ಪೂರಕ ಉದ್ಯಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವುದು ಹಾಗೂ ಅವರ ಜೀವನಮಟ್ಟವನ್ನು ಸುಧಾರಿಸುವ ಉದ್ದೇಶದಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ MSME, ಪ್ರಧಾನಮಂತ್ರಿ ಕಿಸಾನ್ ಸಿಂಚಾಯಿ ಯೋಜನೆ (PMKSY), ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ (NRLM), ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (PM-KISAN) ಹಾಗೂ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ (PMFBY) ಸೇರಿದಂತೆ ವಿವಿಧ ಯೋಜನೆಗಳ ಉದ್ದೇಶ, ಪ್ರಯೋಜನಗಳು ಹಾಗೂ ಅರ್ಹತೆಗಳ ಕುರಿತು ರೈತರಿಗೆ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ರೈತರು ಆಸಕ್ತಿಯಿಂದ ಭಾಗವಹಿಸಿ, ತಮಗೆ ಲಭ್ಯವಿರುವ ವಿವಿಧ ಸರ್ಕಾರಿ ಯೋಜನೆಗಳ ಕುರಿತು ಪ್ರಶ್ನೆಗಳನ್ನು ಕೇಳಿದರು.

ರೈತರ ಪ್ರಶ್ನೆಗಳಿಗೆ ಸಂಪನ್ಮೂಲ ವ್ಯಕ್ತಿಗಳು ಸೂಕ್ತ ಮಾಹಿತಿ ನೀಡಿ, ಅವರಲ್ಲಿದ್ದ ಗೊಂದಲ ಹಾಗೂ ಸಂಶಯಗಳನ್ನು ನಿವಾರಿಸಿದರು.

ಕೃಷಿ ಕ್ಷೇತ್ರದಲ್ಲಿ ಯುವಕರನ್ನು ಆಕರ್ಷಿಸುವುದು, ಸ್ವಯಂ ಉದ್ಯೋಗ ಹಾಗೂ ಪೂರಕ ಉದ್ಯಮಗಳಿಗೆ ಉತ್ತೇಜನ ನೀಡುವುದು ಮತ್ತು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದುಕೊಂಡು ಗ್ರಾಮೀಣ ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಕಾರ್ಯಕ್ರಮವು ಉಪಯುಕ್ತವಾಗಿತ್ತು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *