
ಹೊಳೇನರಸೀಪುರ: ಪತ್ನಿಯನ್ನ ರಸ್ತೆಯಲ್ಲಿ ಅಟ್ಟಾಡಿಸಿ ಕತ್ತಿಯಿಂದ ಪತಿರಾಯ ಹಲ್ಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ತಿರುಮಲಾಪುರದಲ್ಲಿ ನಡೆದಿದೆ.
ಪತಿ ಪತ್ನಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ವಿಡಿಯೋ ಮೊಬೈಲ್‌ನಲ್ಲಿ ಸೆರೆಯಾಗಿದೆ.ಕೌಟುಂಬಿಕ ಕಲಹ ಹಿನ್ನೆಲೆ ಮನೆ ಎದುರೇ ಪತ್ನಿ ಮೇಲೆ ಪತಿ ಕತ್ತಿಯಿಂದ ಹಲ್ಲೆ ಮಾಡಿದ್ದಾನೆ. ಪತಿ ಶ್ರೀನಿವಾಸನಿಂದ ಪತ್ನಿ ಸವಿತಾ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದೆ.
ಸವಿತಾ ಸಹೋದರಿ ಅನಿತಾ ಕಾರಿನ ಮೇಲೂ ಕಿಡಿಗೇಡಿ ಪತಿ ದಾಳಿ ಮಾಡಿದ್ದಾನೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಇಬ್ಬರೂ ದೂರ ಇದ್ದರು. ಅಸ್ತಿ ಭಾಗಕ್ಕಾಗಿ ಪತಿ ವಿರುದ್ಧ ಕೇಸ್ ದಾಖಲಿಸಿ, ಕಾನೂನು ಹೋರಾಟವನ್ನು ಸವಿತಾ ಮಾಡುತ್ತಿದ್ದರು. ಇದೇ ವಿಚಾರದಲ್ಲಿ ನಿನ್ನೆ ಸಂಜೆ ಜಗಳ ತೆಗೆದು ಪತ್ನಿ ಮೇಲೆ ಅಟ್ಯಾಕ್ ಮಾಡಿದ್ದಾನೆ ಎನ್ನಲಾಗ್ತಿದೆ. ಗಾಯಾಳು ಪತ್ನಿ ಸವಿತಾರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿ ಪತಿ ಬಂಧನಕ್ಕೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
