
ಹಾಸನ: ಬಾಳೆಹೊನ್ನೂರು ಜಗದ್ಗುರುಗಳ ನೇತೃತ್ವದಲ್ಲಿ ಡಿಸೆಂಬರ್ 2ರಂದು ಹಾಸನದಲ್ಲಿ ಧಾರ್ಮಿಕ ಸಮಾರಂಭವನ್ನು ಆಯೋಜಿಸಲು ನಿರ್ಧರಿಸಲಾಗಿದೆ.
ಸೆಪ್ಟೆಂಬರ್ 3ರಂದು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಮಠದಲ್ಲಿ ನಡೆದ ಶ್ರಾವಣ ಮಾಸದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಬಾಳೆಹೊನ್ನೂರು ರಂಭಾಪುರಿ ಮಠದ ಮಠಾಧೀಶರಾದ ಪರಮಪೂಜ್ಯ ಶ್ರೀ ವೀರ ಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿಯವರಿಂದ ಅಶೀರ್ವಚನ ಪಡೆಯಲಾಯಿತು.
ಈ ಸಂದರ್ಭದಲ್ಲಿ ಹಾಸನದಲ್ಲಿ ಬಾಳೆಹೊನ್ನೂರು ಜಗದ್ಗುರುಗಳ ಧಾರ್ಮಿಕ ಸಮಾರಂಭ ಆಯೋಜಿಸುವ ಕುರಿತು ಪರಮಪೂಜ್ಯರ ಅನುಮತಿ ಪಡೆಯಲಾಗಿದೆ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಹಾಸನ ತಾಲ್ಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಹಾಸನ ತಾಲ್ಲೂಕು ಅಧ್ಯಕ್ಷ ಕಟ್ಟಾಯ ಕುಮಾರ್, ಪ್ರಧಾನ ಕಾರ್ಯದರ್ಶಿ ಹೆಚ್.ವಿ. ಹೇಮಂತ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಪುನೀತ್ ಪಟೇಲ್, ಜಿಲ್ಲಾ ನಿರ್ದೇಶಕ ಶೋಭನ್ ಬಾಬು, ತಾಲ್ಲೂಕು ನಿರ್ದೇಶಕ ಡಿ.ವಿ. ಮದನ್, ಹಾಸನ ಮಹಾನಗರ ಸಮಿತಿ ಅಧ್ಯಕ್ಷ ಹೆಚ್. ರೋಹಿತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.






