
ಸಕಲೇಶಪುರ : ಕಸಬಾ ಹೋಬಳಿ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಚಾಂಪಿಯನ್ ಪ್ರಶಸ್ತಿಯೊಂದಿಗೆ ಸಮಗ್ರ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಬಾಲಕರ ವಿಭಾಗದಲ್ಲಿ ಸಾಧನೆಪ್ರಾರ್ಥನ್ ಕೆ.ಕೆ. ಅವರು 100 ಮೀಟರ್ ಓಟದಲ್ಲಿ ಪ್ರಥಮ, 200 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ಅಭಿಷೇಕ್ ಹೆಚ್.ಡಿ. ಅವರು 400 ಮೀಟರ್ ಓಟದಲ್ಲಿ ಪ್ರಥಮ, ಗುಂಡು ಎಸೆತ ಹಾಗೂ ತಟ್ಟೆ ಎಸೆತದಲ್ಲಿ ತೃತೀಯ ಸ್ಥಾನ ಗಳಿಸಿದ್ದಾರೆ. ಜೊತೆಗೆ 4×800 ಮೀಟರ್ ಮತ್ತು 4×400 ಮೀಟರ್ ರಿಲೇ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಸೇವಂತ್ ಕುಮಾರ್, ಮನ್ವಿತ್ ಜೆ.ಎಸ್. ಅವರು 800 ಮೀಟರ್ ಓಟದಲ್ಲಿ ಪ್ರಥಮ, ಉದ್ದ ಜಿಗಿತದಲ್ಲಿ ತೃತೀಯ ಹಾಗೂ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಅಮೃತ್ ಕುಮಾರ್ ಹೆಚ್.ಡಿ. ಅವರು 4×400 ಮೀಟರ್ ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಧನುಷ್ ಜಿ.ಪಿ. ಅವರು 1500 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ಮಹಮ್ಮದ್ ಹೂವೇಸ್ ಅವರು 3000 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.ಇದಲ್ಲದೆ ಬಾಲಕರ ವಾಲಿಬಾಲ್ ತಂಡ ಪ್ರಥಮ ಹಾಗೂ ಬಾಲ್ ಬ್ಯಾಡ್ಮಿಂಟನ್ ತಂಡ ದ್ವಿತೀಯ ಸ್ಥಾನ ಪಡೆದಿದೆ.
ಬಾಲಕಿಯರ ವಿಭಾಗದಲ್ಲಿ ಸಾಧನೆರಿತಾ ಎಸ್.ಪಿ. ಅವರು ಎತ್ತರ ಜಿಗಿತದಲ್ಲಿ ಪ್ರಥಮ ಹಾಗೂ 100 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.ಮಾನ್ಯ ಎಸ್.ಎನ್. ಅವರು 400 ಮೀಟರ್ ಓಟ, ಉದ್ದ ಜಿಗಿತ ಹಾಗೂ ತ್ರಿವಿಧ ಜಿಗಿತದಲ್ಲಿ ಪ್ರಥಮ ಸ್ಥಾನ ಗಳಿಸಿ ಅತ್ಯುತ್ತಮ ಸಾಧನೆ ಮೆರೆದಿದ್ದಾರೆ.
ಮನಿಷಾ ಎಸ್.ಎನ್. ಅವರು 400 ಮೀಟರ್ ಓಟದಲ್ಲಿ ದ್ವಿತೀಯ, ಎತ್ತರ ಜಿಗಿತ ಹಾಗೂ ತ್ರಿವಿಧ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಸಾನಿಕ ಉಗಮ ಅವರು 1500 ಮೀಟರ್ ಓಟದಲ್ಲಿ ತೃತೀಯ ಹಾಗೂ ಪೂರ್ವಿತಾ ಎನ್. ಅವರು 1500 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಬಿಪೀಶಾ ಅವರು ಜಾವೆಲಿನ್ ಎಸೆತದಲ್ಲಿ ಪ್ರಥಮ, ಲೇಖನಾ ಅವರು ಹ್ಯಾಮರ್ ಎಸೆತದಲ್ಲಿ ದ್ವಿತೀಯ, ಪ್ರಾಪ್ತಿ ಎಸ್.ವಿ. ಅವರು ಚಕ್ರ ಎಸೆತದಲ್ಲಿ ಪ್ರಥಮ ಹಾಗೂ ಶಾವಣ್ಯ ಅವರು ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಬಾಲಕಿಯರ 4×100 ಮೀಟರ್ ರಿಲೇ ತಂಡ ದ್ವಿತೀಯ ಹಾಗೂ 4×400 ಮೀಟರ್ ರಿಲೇ ತಂಡ ಪ್ರಥಮ ಸ್ಥಾನ ಪಡೆದಿದೆ. ತ್ರೋಬಾಲ್, ವಾಲಿಬಾಲ್ ಹಾಗೂ ಬಾಲ್ ಬ್ಯಾಡ್ಮಿಂಟನ್ ತಂಡಗಳು ದ್ವಿತೀಯ ಸ್ಥಾನ ಗಳಿಸಿವೆ.
ಈ ಕ್ರೀಡಾಕೂಟದಲ್ಲಿ ಬಾಲಕರ ಹಾಗೂ ಬಾಲಕಿಯರ ವೈಯಕ್ತಿಕ ಪ್ರಶಸ್ತಿಗಳನ್ನು ಶಾಲೆಯ ವಿದ್ಯಾರ್ಥಿಗಳು ಪಡೆದುಕೊಂಡಿದ್ದು, ಬಾಲಕರ ವಿಭಾಗದ ಚಾಂಪಿಯನ್, ಬಾಲಕಿಯರ ವಿಭಾಗದ ಚಾಂಪಿಯನ್ ಹಾಗೂ ಪ್ರತಿಷ್ಠಿತ ಸಮಗ್ರ ಪ್ರಶಸ್ತಿಯನ್ನು ಸಂತ ಜೋಸೆಫರ ಆಂಗ್ಲ ಮಾಧ್ಯಮ ಶಾಲೆ ತನ್ನದಾಗಿಸಿಕೊಂಡಿದೆ.
ವಿದ್ಯಾರ್ಥಿಗಳ ಈ ಅದ್ಭುತ ಸಾಧನೆಗೆ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಐಡಾ ಡಿ ಅಲ್ಮೇಡಾ, ಸಿಸ್ಟರ್ ಹೆಲೆನ್ ಪೆರೇರ, ದೈಹಿಕ ಶಿಕ್ಷಣ ಶಿಕ್ಷಕರಾದ ರಮೇಶ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.







