ಹಾಸನ: ಸಾಕ್ಷರತಾ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ಹಾಗೂ ಕಲ್ಪಿತ ಜನಜಾಗೃತಿ ಮತ್ತು ಸಾಂಸ್ಕೃತಿಕ ಅಭಿವೃದ್ಧಿ ಸಂಸ್ಥೆ (ರಿ), ಹೊಳೆನರಸೀಪುರ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಹಾಸನ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಆವರಣದಲ್ಲಿ ಸಾಕ್ಷರತೆ ಕುರಿತು ಬೀದಿ ನಾಟಕ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಹಾಸನ ಎಪಿಎಂಸಿ ತರಕಾರಿ ಮಾರುಕಟ್ಟೆ ವರ್ತಕರ ಸಂಘದ ಅಧ್ಯಕ್ಷರಾದ ಎಚ್.ಆರ್. ರಾಮಣ್ಣ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ತರಕಾರಿ ಮಾರುಕಟ್ಟೆಯ ಹಿರಿಯ ಸದಸ್ಯರಾದ ಎಚ್‌ಎನ್‌ಎಸ್ ಶಿವಪ್ಪಣ್ಣ, ರೋಟರಿ ಕ್ಲಬ್ ಅಧ್ಯಕ್ಷ ರೋ. ಕೆ.ಎಸ್. ಯೋಗೇಶ್, ಕಾರ್ಯದರ್ಶಿ ರೋ. ಬಿ.ಎಂ. ದರ್ಶನ್, ಖಜಾಂಚಿ ರೋ. ಎಂ.ಡಿ. ಶಶೀಂದ್ರನಾಥನ್, ಸದಸ್ಯ ರೋ. ಆದರ್ಶ, ನೂತನ ಸದಸ್ಯ ಹಿತೇಶ್ ಕುಮಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಸದಸ್ಯರಾದ ರೋ. ಕುಮಾರ್ ಕಟ್ಟೆಬೆಳಗುಲಿ ಹಾಗೂ ಅವರ ತಂಡ ಸಾಕ್ಷರತಾ ಗೀತೆಗಳನ್ನು ಹಾಡುವ ಮೂಲಕ ನೆರೆದಿದ್ದ ಸಾರ್ವಜನಿಕರಲ್ಲಿ ಸಾಕ್ಷರತೆಯ ಮಹತ್ವದ ಕುರಿತು ಅರಿವು ಮೂಡಿಸಿದರು.

ಬೀದಿ ನಾಟಕದ ಮೂಲಕ ಶಿಕ್ಷಣ ಮತ್ತು ಸಾಕ್ಷರತೆಯ ಅಗತ್ಯತೆಯನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸಲಾಯಿತು.

ಸುಮಾರು 500ಕ್ಕೂ ಅಧಿಕ ಸಾರ್ವಜನಿಕರು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ರೋಟರಿ ಕ್ಲಬ್ ಆಫ್ ಹಾಸನ್ ಸನ್ ರೈಸ್ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *