ಸಕಲೇಶಪುರ: ದಿನಾಂಕ 9-9-2026 ರಂದು ಸಕಲೇಶಪುರದ ಸುಭಾಷ್ ಮೈದಾನದಲ್ಲಿ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಳ್ಳುಪೇಟೆಯ ಶ್ರೀ ರಂಗನಾಥ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

14 ವರ್ಷದೊಳಗಿನ ಬಾಲಕಿಯರ ವಿಭಾಗದ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ ಹಾಗೂ ಬಾಲಕರ ವಿಭಾಗದ ವಾಲಿಬಾಲ್‌ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. 17 ವರ್ಷದೊಳಗಿನ ಬಾಲಕರ ವಿಭಾಗದ ವಾಲಿಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವೈಯಕ್ತಿಕ ಸ್ಪರ್ಧೆಗಳಲ್ಲಿ ಸಿರಿ ಕೆ.ಎಸ್. ಉದ್ದ ಜಿಗಿತದಲ್ಲಿ ಪ್ರಥಮ, 100 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ಬಾಲಕಿಯರ ವಿಭಾಗದಲ್ಲಿ ವೈಯಕ್ತಿಕ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾಳೆ.

ಹೇಮಂತ್ ಕುಮಾರ್ 600 ಮೀಟರ್ ಓಟದಲ್ಲಿ ಪ್ರಥಮ, ಎತ್ತರ ಜಿಗಿತದಲ್ಲಿ ದ್ವಿತೀಯ ಹಾಗೂ 100 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾನೆ.ಪ್ರೇರಣಾ ಚಕ್ರ ಎಸೆತದಲ್ಲಿ ದ್ವಿತೀಯ ಹಾಗೂ ಜಾವಲಿನ್‌ನಲ್ಲಿ ತೃತೀಯ ಸ್ಥಾನ, ಸೌಮ್ಯ 100 ಮೀಟರ್ ಓಟದಲ್ಲಿ ಪ್ರಥಮ ಹಾಗೂ 400 ಮೀಟರ್ ಓಟದಲ್ಲಿ ತೃತೀಯ ಸ್ಥಾನ, ಧನುಷ್ ಉದ್ದ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಇದೇ ವೇಳೆ ಬಾಲಕಿಯರ ವಿಭಾಗದ 4×100 ಮೀಟರ್ ರಿಲೇ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.ವಿದ್ಯಾರ್ಥಿಗಳ ಈ ಅತ್ಯುತ್ತಮ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *