
ಸಕಲೇಶಪುರ: 2026-27ನೇ ಸಾಲಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದಲ್ಲಿರುವ ದೀಕ್ಷಾಭೂಮಿಗೆ, ವಿಜಯದಶಮಿ ದಿನವಾದ ಅಕ್ಟೋಬರ್ 21, 2026ರಂದು ನಡೆಯುವ ಪ್ರವರ್ಧನ ದಿನಾಚರಣೆಗೆ ಕಳುಹಿಸುವ ಸಂಬಂಧ ಯಾತ್ರಾರ್ಥಿಗಳನ್ನು ಆಯ್ಕೆ ಮಾಡಿ ಕೆಎಸ್‌ಆರ್‌ಟಿಸಿ ಬಸ್, ಇತರೆ ಸಾರಿಗೆ ಬಸ್ ಹಾಗೂ ರೈಲು ಮೂಲಕ ಕಳುಹಿಸಲು ಸಮಾಜ ಕಲ್ಯಾಣ ಇಲಾಖೆಯಿಂದ ಆದೇಶಿಸಲಾಗಿದೆ.
ಅದರಂತೆ ಸಕಲೇಶಪುರ ತಾಲೂಕಿನ ಡಾ. ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ನಾಗಪುರದ ದೀಕ್ಷಾಭೂಮಿ ಯಾತ್ರೆಗೆ ಅಕ್ಟೋಬರ್ 19ರಿಂದ 22, 2026ರವರೆಗೆ ಪ್ರಯಾಣಿಸಿ ಹಿಂದಿರುಗುವ ಸಂಬಂಧ ಸೆಪ್ಟೆಂಬರ್ 19ರಿಂದ ಅಕ್ಟೋಬರ್ 9, 2026ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಿದ ನಂತರ ಅರ್ಜಿಯ ಪ್ರತಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ರೇಷನ್ ಕಾರ್ಡ್, ಆಧಾರ್ ಕಾರ್ಡ್ ಪ್ರತಿ, ಬ್ಯಾಂಕ್ ಪಾಸ್‌ಬುಕ್ ಪ್ರತಿ ಹಾಗೂ ಎರಡು ಪಾಸ್‌ಪೋರ್ಟ್ ಅಳತೆಯ ಭಾವಚಿತ್ರಗಳನ್ನು ಸಕಲೇಶಪುರ ಸಮಾಜ ಕಲ್ಯಾಣ ಇಲಾಖೆಯ ಕಚೇರಿಗೆ ಸಲ್ಲಿಸುವಂತೆ ಸಹಾಯಕ ನಿರ್ದೇಶಕರಾದ ಸಿ.ಎಂ. ಮೋಹನ್ ಕುಮಾರ್ ಅವರು ಕೋರಿದ್ದಾರೆ.
ಅರ್ಜಿ ಸಲ್ಲಿಸುವ ವೆಬ್ ವಿಳಾಸ:
https://swd.karnataka.gov.in/
