ಸಕಲೇಶಪುರ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಅಭಿವೃದ್ಧಿ ಹಾಗೂ ಜನಕಲ್ಯಾಣ ಕಾರ್ಯಕ್ರಮಗಳಿಂದ ದೇಶವು ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಸಕಲೇಶಪುರ ಮಂಡಲ ಭಾರತೀಯ ಜನತಾ ಪಕ್ಷ ಹಾಗೂ ಮಹಿಳಾ ಮೋರ್ಚಾ ವತಿಯಿಂದ **‘ಸೇವಾ ಸಂಕಲ್ಪ ಅಭಿಯಾನ’**ದ ಅಂಗವಾಗಿ ನಗರದ ಕುಶಾಲನಗರದ ಅಣ್ಣಪ್ಪಸ್ವಾಮಿ ವೃತ್ತದಲ್ಲಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಗೆ ಭೇಟಿ ನೀಡಿ, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

ದೇಶದ ಅಭಿವೃದ್ಧಿಯೊಂದಿಗೆ ಮಹಿಳೆಯರು, ಯುವಕರು, ರೈತರು ಹಾಗೂ ವಿವಿಧ ವರ್ಗಗಳ ಸಬಲೀಕರಣಕ್ಕೆ ಕೇಂದ್ರ ಸರ್ಕಾರ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಅಭಿವೃದ್ಧಿ ಕಾರ್ಯಗಳಲ್ಲಿ ಜನರ ಸಹಭಾಗಿತ್ವವೂ ಪ್ರಮುಖವಾಗಿದ್ದು, ಸಮಾಜದ ಎಲ್ಲ ವರ್ಗದವರು ದೇಶದ ಪ್ರಗತಿಗೆ ಕೈಜೋಡಿಸಬೇಕು ಎಂದು ಹೇಳಿದರು.

ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮೂಲಕ ಮೂಲಸೌಕರ್ಯ, ಡಿಜಿಟಲ್ ಸೇವೆ, ಸಾಮಾಜಿಕ ಭದ್ರತೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು. ರಂಗೋಲಿ ಸ್ಪರ್ಧೆಗೆ ಮೆಚ್ಚುಗೆಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಆಯೋಜಿಸಿದ್ದ ರಂಗೋಲಿ ಸ್ಪರ್ಧೆಯಲ್ಲಿ ಮಹಿಳೆಯರು ಹಾಗೂ ಸಾರ್ವಜನಿಕರು ಉತ್ಸಾಹದಿಂದ ಪಾಲ್ಗೊಂಡಿದ್ದರು.

ವಿವಿಧ ವಿಷಯಗಳನ್ನು ಬಿಂಬಿಸುವ ಆಕರ್ಷಕ ರಂಗೋಲಿಗಳನ್ನು ಬಿಡಿಸಲಾಗಿತ್ತು. ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ವಿಜೇತರಿಗೆ ಶಾಸಕ ಸಿಮೆಂಟ್ ಮಂಜು ಬಹುಮಾನ ವಿತರಿಸಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಶ್ರೀ ಗಣಪತಿಯ ದರ್ಶನ ಪಡೆದು ಆಶೀರ್ವಾದ ಪಡೆದರು.

ಕಾರ್ಯಕ್ರಮದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನೇತ್ರಾವತಿ ಮಂಜುನಾಥ್, ಸಕಲೇಶಪುರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಬಬಿತಾ ವಿಶ್ವನಾಥ್, ಮಂಡಲ ಪ್ರಧಾನ ಕಾರ್ಯದರ್ಶಿ ಅಗ್ನಿ ಸೋಮಶೇಖರ್, ಮಧು ಬೊಮ್ಮನಕೆರೆ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *