ಸಕಲೇಶಪುರ, ಅ.5: ಪ್ರಧಾನಮಂತ್ರಿ ನರೇಂದ್ರ ಮೋದಿಯವರ 25 ವರ್ಷಗಳ ಜನಸೇವೆಯನ್ನು ಸ್ಮರಿಸಿ, “ಸಾರ್ಥಕತೆಯ ಸೇವಾ ಸಂಕಲ್ಪ ಅಭಿಯಾನ”ದ ಅಂಗವಾಗಿ ಇಂದು ಸಕಲೇಶಪುರದ ಹಳೆ ಬಸ್ ನಿಲ್ದಾಣದ ಮುಂಭಾಗದಲ್ಲಿ ‘ನಮೋ ಸೇವಾ ಕಥನ’ ಬೀದಿ ನಾಟಕ ಪ್ರದರ್ಶನ ನಡೆಯಿತು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಸೇವೆ, ದೇಶದ ಅಭಿವೃದ್ಧಿ ಹಾಗೂ ವಿವಿಧ ಜನಪರ ಯೋಜನೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಬೀದಿ ನಾಟಕವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹಾಗೂ ಬಿಜೆಪಿ ಕಾರ್ಯಕರ್ತರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಸಕಲೇಶಪುರದ ವೀರ ಯೋಧ ಏ.ಕೆ. ಸಾಗರ್ ಅವರ ಪ್ರತಿಮೆಯ ಸಮೀಪ ಸ್ವಚ್ಛತಾ ಕಾರ್ಯ ಕೈಗೊಂಡು, ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಸಿಮೆಂಟ್ ಮಂಜುನಾಥ್, ಬಿಜೆಪಿ ಜಿಲ್ಲಾ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ, ತಾಲ್ಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜಕುಮಾರ್, ಅಮಿತ್ ಶೆಟ್ಟಿ, ಜಿಲ್ಲಾ ಮಾಧ್ಯಮ ಸಹ ಪ್ರಮುಖ್ ದಯಾನಂದ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ, ತಾಲ್ಲೂಕು ಕಾರ್ಯದರ್ಶಿ ಮಧು ಬೊಮ್ಮನಕೆರೆ, ಅಗ್ನಿ ಸೋಮಶೇಖರ್, ನಗರ ಅಧ್ಯಕ್ಷ ಲೋಕೇಶ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *