
ಹೆತ್ತೂರು: ಇಲ್ಲಿನ ಬಿಪಿನ್ ರಾವತ್ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಯಸಳೂರು ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ 72ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಜಿಲ್ಲಾ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೊಜೆಕ್ಟರ್ ಮೂಲಕ Nature Conservation Foundationನ ನಿಸಾರ್ ಹಾಗೂ ತಂಡದವರು ವಿದ್ಯಾರ್ಥಿಗಳಿಗೆ ಆನೆ–ಮನುಷ್ಯ ಸಂಘರ್ಷ ಹಾಗೂ ಅದನ್ನು ತಡೆಗಟ್ಟಲು ಅರಣ್ಯ ಇಲಾಖೆ ಕೈಗೊಂಡಿರುವ ಕ್ರಮಗಳ ಕುರಿತು ಅರಿವು ಮೂಡಿಸಿದರು. ಇದೇ ವೇಳೆ ಹಾವುಗಳು ಹಾಗೂ ಕಪ್ಪೆಗಳ ಕುರಿತು ಸಹ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಬಿ.ಡಿ. ಮಂಜುನಾಥ್, ಬಿಪಿನ್ ರಾವತ್ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರಾದ ಮಧು, ರಾಜಶೇಖರ್, ಚೇತನ್ ಕುಮಾರ್, ಯಸಳೂರು ವಲಯ ಅರಣ್ಯಾಧಿಕಾರಿ ರೇವಣ್ಣ ಸಿದ್ದಯ್ಯ ಹಿರೇಮಠ್, ಉಪ ವಲಯ ಅರಣ್ಯಾಧಿಕಾರಿಗಳಾದ ರಾಘವೇಂದ್ರ, ನಂದೀಶ್, ಹರ್ಷಕುಮಾರ್, ಗುರುಪಾದಪ್ಪ ನಾಯಕ್, ರಘು ಸೇರಿದಂತೆ ಅರಣ್ಯ ಇಲಾಖೆ ಹಾಗೂ ಇ.ಟಿ.ಎಫ್ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
