
ಸಕಲೇಶಪುರ : ನಗರದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ತಾಲ್ಲೂಕು ವಿಶ್ವಕರ್ಮ ಸಮಾಜದ ವತಿಯಿಂದ ಅ.25ರಂದು ವಿಶ್ವಕರ್ಮ ಮಹೋತ್ಸವ ನಡೆಯಲಿದೆ.
ಅರೇಮಾದನಹಳ್ಳಿ ವಿಶ್ವಕರ್ಮ ಜಗದ್ಗುರುಗಳ ಸಾನಿಧ್ಯದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಶಾಸಕ ಸಿಮೆಂಟ್ ಮಂಜು ಅಧ್ಯಕ್ಷತೆ ವಹಿಸಲಿದ್ದು, ಪಿ. ಸುಜ್ಞಾನಮೂರ್ತಿ ಹಾಗೂ ಮುರುಳಿ ಮೋಹನ್ ಉದ್ಘಾಟಿಸಲಿದ್ದಾರೆ. ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಬೆಳಿಗ್ಗೆ 9ಕ್ಕೆ ಸಕಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಪೂಜೆ, 10ಕ್ಕೆ ವಿಶ್ವಕರ್ಮ ಪೂಜೆ ಹಾಗೂ 10.30ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಎಚ್.ಪಿ. ಭೋಗರಾಜಾಚಾರ್ ತಿಳಿಸಿದ್ದಾರೆ.


