ಸಕಲೇಶಪುರ : ಲಯನ್ಸ್ ಮತ್ತೊ ಲಿಯೋ ಸಂಸ್ಥೆ ವತಿಯಿಂದ ಪಟ್ಟಣದ ಲಯನ್ಸ್ ಭವನದಲ್ಲಿ ತಾಲೂಕಿನ ಪ್ರೌಢಶಾಲಾ ಮಕ್ಕಳಿಗಾಗಿ ಪ್ರಪಂಚದಲ್ಲಿ ಶಾಂತಿ ನೆಲೆಸುವ ಸಂದೇಶ ಸಾರುವ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿತ್ತು. ತಾಲೂಕಿನ ಹಲವು ಶಾಲೆಗಳ ಮಕ್ಕಳು ಭಾಗವಹಿಸಿದ್ದು, ವಿಶ್ವ ಶಾತಿಯ ಮಹತ್ವದ ಕುರಿತಾದ ಮಕ್ಕಳ ಭಾವನೆಗಳು ಚಿತ್ರಗಳ ಮೂಲಕ ಬಿಡಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಲಯನ್ ಸಂಸ್ಥೆಯ ಅಧ್ಯಕ್ಷ ವಿಶ್ವನಾಥ್ ಮಕ್ಕಳ ದೆಸೆಯಿಂದಲೇ ಸಹಬಾಳ್ವೆ, ಪರಸ್ಪರ ಪ್ರೀತಿ ವಿಶ್ವಾಸ ಹಾಗೂ ಪರಿಸರದ ಮೇಲಿನ ಕಾಳಜಿ, ಇವೆಲ್ಲದರ ಮೂಲಕ ವಿಶ್ವದಲ್ಲಿ ಶಾಂತಿ ನೆಲೆಸಬೇಕೆಂಬ ಭಾವನೆ ಮಕ್ಕಳಲ್ಲಿ ಮೂಡಿಸುವ ಸಲುವಾಗಿ ಅಂತರಾಷ್ಟ್ರೀಯ ಲಯನ್ಸ್ ಸಂಸ್ಥೆ ವತಿಯಿಂದ ವಿಶ್ವಶಾಂತಿಗಾಗಿ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಭಾಗವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದರು

ಈ ಸಂದರ್ಭದಲ್ಲಿ ಸಂಸ್ಥೆ ,ವಲಯಾಧ್ಯಕ್ಷ ಮೀನಾಕ್ಷಿ, ಖಜಾಂಜಿ ಸೋಮಶೇಖರ್ಕಾರ್ಯದರ್ಶಿ ಜಯಶಂಕರ್ ಉಪಾಧ್ಯಕ್ಷ ಕೆ.ಆರ್. ವೆಂಕಟೇಶ್, ಹಿರಿಯ ಸದಸ್ಯರುಗಳಾದ ಸುದರ್ಶನ್, ಸೂರ್ಯನಾರಾಯಣ ಶೆಟ್ಟಿ, ಅಬ್ದುಲ್ ಖಾದರ್, ಪ್ರಸನ್ನಕುಮಾರ್ ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *