ಹಾಸನ : ರಾಜ್ಯದ ಚುನಾವಣೆ ನಡೆಯುವುದೇ ಬೇರೆ, ಕೇಂದ್ರದ ಚುನಾವಣೆ ಬೇರೆ ಇರುವಾಗ ಯಾವ ಸಮಸ್ಯೆ ಉದ್ಭವಿಸುವುದಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ.

ನಗರದ ಶ್ರೀ ಸೀತಾರಾಮಾಂಜನೇಯ ದೇವಾಲಯದ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾದರೆ ರಾಜ್ಯ ಸರ್ಕಾರ ಅಧಿಕಾರದಲ್ಲಿ ಇರುವುದಿಲ್ಲ ಎಂಬ ಪ್ರಶ್ನೆಗೆ ಅದು ಉದ್ಬವಿಸುವುದಿಲ್ಲ ರಾಜ್ಯದ ಚುನಾವಣೆ ಬೇರೆ ಕೇಂದ್ರದ ಚುನಾವಣೆ ಬೇರೆ ಎಂದರು.

ಕೇಂದ್ರ ಸರ್ಕಾರವು ಉದ್ಯಮಿಗಳ ೧೦ ಲಕ್ಷ ಕೋಟಿ ಮನ್ನಾ ಮಾಡಿರುವುದು ಸರ್ಕಾರಕ್ಕೆ ಆರ್ಥಿಕ ನಷ್ಟವಾಗು ವುದಿಲ್ಲವೆ?. ಕಾಂಗ್ರೆಸ್ ಪಕ್ಷ ಕೊಟ್ಟಿರುವ ಗ್ಯಾರಂಟಿ ಕಾರ್ಡ್ ಗೆ ನಾವು ಬದ್ದರಾಗಿದ್ದೆವೆ ಎಂದರು.

ಸಕಲೇಶಪುರ ಸಂಚಾರ ಸ್ಥಗಿತ ಸಮಸ್ಯೆಯನ್ನು ಮಾಧ್ಯಮದಲ್ಲಿ ನೋಡಿದ್ದು, ಆದ ಕಾರಣ ಸ್ಥಳ ಪರಿಶೀಲನೆ ಮಾಡಿದ್ದೆನೆ. ಅಲ್ಲಿ ಅಂತಹ ಸಮಸ್ಯೆ ಕಂಡುಬಂದಿರುವುದಿಲ್ಲ. ನಾವು ಎರಡು ಹಂತದಲ್ಲಿ ರಸ್ತೆ ನಿರ್ಮಾಣ ಮಾಡಲು ಗಡುವು ನೀಡಿದ್ದೆವೆ. ಮುಂಬರುವ ಮಾರ್ಚ್ ತಿಂಗಳೊಳಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸುವ ವಿಶ್ವಾಸ ಇದೆ ಎಂದು ಹೇಳಿದರು. ಹಾಸನ ದಿಂದ ಸಕಲೇಶಪುರದವರೆಗಿನ ಕಾಮಗಾರಿ ನವಂಬರ್ ೧ ರೊಳಗೆ ಮುಗಿಸಲು ಸೂಚನೆ ನೀಡಿದ್ದೆನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ವಿಧಾನಪರಿಷತ್ ಸದಸ್ಯರಾದ ಎಂ.ಎ. ಗೋಪಾಲಸ್ವಾಮಿ, ಕಾಂಗ್ರೆಸ್ ಮುಖಂಡ ಶ್ರೇಯಸ್ ಪಟೇಲ್, ಮುರುಳಿಮೋಹನ್, ಸೇರಿದಂತೆ ಸುಮಾರು ೧೫೦ ಜನ ಕಾಂಗ್ರೆಸ್ ಮುಖಂಡರು ಹಾಜರಿದ್ದರು. ನಂತರ ತುಮಕೂರು ಜಿಲ್ಲೆಗೆ ಪ್ರಯಾಣ ಬೆಳೆಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *