ಸಕಲೇಶಪುರ: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಸ್ಥಳಗಳ ಮೇಲೆ ಸಕಲೇಶಪುರ ನಗರ ಪೊಲೀಸರು ಕೇವಲ 24 ಗಂಟೆಗಳ ಅಂತರದಲ್ಲಿ ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ, ಸುಮಾರು 80 ಕೆಜಿಗೂ ಅಧಿಕ ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ.

ದಿನಾಂಕ 12-11-2026ರ ಗುರುವಾರ ಮಧ್ಯಾಹ್ನ ಅಜಾದ್ ರಸ್ತೆಯಲ್ಲಿರುವ ಅಂಗಡಿಯೊಂದರಲ್ಲಿ ಹಾಗೂ 13-11-2026ರ ಶುಕ್ರವಾರ ಬೆಳಿಗ್ಗೆ ಆಚಂಗಿಯ ಮನೆಯೊಂದರಲ್ಲಿ ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಬಗ್ಗೆ ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಈ ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಸಕಲೇಶಪುರ ಘಟಕದ ವತಿಯಿಂದ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಲಾಗಿದೆ.

ಲೀಸರ ಕಾರ್ಯವೈಖರಿ ಶ್ಲಾಘನೀಯವಾಗಿದ್ದು, ಮುಂದಿನ ದಿನಗಳಲ್ಲಿಯೂ ಗೋಸಂತತಿಯನ್ನು ಕಾನೂನಿನ ಚೌಕಟ್ಟಿನೊಳಗೆ ರಕ್ಷಿಸುವಲ್ಲಿ ಪೊಲೀಸ್ ಇಲಾಖೆಯ ಪಾತ್ರ ಮಹತ್ವದ್ದಾಗಿದೆ. ಇಂತಹ ಕಾರ್ಯಗಳಿಗೆ ಬಜರಂಗದಳದ ಕಾರ್ಯಕರ್ತರು ಸದಾ ಕೈಜೋಡಿಸಿ ಸಹಕಾರ ನೀಡಲಿದ್ದಾರೆ ಎಂದು ತಾಲ್ಲೂಕು ಸಂಯೋಜಕ ಸುಜನ್ ಗೌಡ ತಿಳಿಸಿದ್ದಾರೆ.

ಗೋ ರಕ್ಷಾ ಪ್ರಮುಖ್ ಕಿರಣ್ ಕುರುಂಡೆ ಹಾಗೂ ಜಿಲ್ಲಾ ಸುರಕ್ಷಾ ಪ್ರಮುಖ್ ರಘು ಪ್ರಸಾದ್ ಅವರು ಕೂಡ ಪೊಲೀಸ್ ಇಲಾಖೆಯ ಕಾರ್ಯಾಚರಣೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *