ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ 79ನೇ ವರ್ಷದ ಜನ್ಮದಿನದ ಪ್ರಯುಕ್ತ ನವೆಂಬರ್ 25ರಂದು ಸಕಲೇಶಪುರದ ಎನ್.ಕೆ. ಗಣಪ್ಪಯ್ಯ ರೋಟರಿ ಶ್ರವಣ ದೋಷವುಳ್ಳ ಮಕ್ಕಳ ಶಾಲೆಯಲ್ಲಿ ವಿಶೇಷ ಸೇವಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆ, ಹಾಸನ ಜಿಲ್ಲೆಯ ನಿಕಟಪೂರ್ವ ಅಧ್ಯಕ್ಷರು ಮಾತನಾಡಿ, ಪೂಜ್ಯ ಹೆಗ್ಗಡೆಯವರಿಗೆ ಭಗವಂತ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಸಮಾಜಮುಖಿ ಸೇವೆಗಳನ್ನು ಮಾಡುವ ಶಕ್ತಿ ನೀಡಲಿ ಎಂದು ಹಾರೈಸಿದರು.

ಶಾಲೆಯ ಮಕ್ಕಳಿಗೆ ವಿದ್ಯೆ, ಬುದ್ಧಿ ಹಾಗೂ ಉತ್ತಮ ಆರೋಗ್ಯ ಕರುಣಿಸಲಿ ಎಂದು ಶುಭ ಹಾರೈಸಿದರು.ಡಾ. ನವೀನ್ ಚಂದ್ರ ಶೆಟ್ಟಿ ಅವರು ಮಾತನಾಡಿ, ಪೂಜ್ಯರಿಗೆ ಸಮಾಜ ಸೇವಾ ಕಾರ್ಯಗಳನ್ನು ನಿರಂತರವಾಗಿ ನಡೆಸಲು ಇನ್ನಷ್ಟು ಆಯಸ್ಸು ಮತ್ತು ಆರೋಗ್ಯವನ್ನು ಮಂಜುನಾಥ ಸ್ವಾಮಿ ಕರುಣಿಸಲಿ. ಶಾಲೆಯ ಮಕ್ಕಳಿಗೆ ವಿದ್ಯೆ ಹಾಗೂ ಆರೋಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.

ಪೂಜ್ಯರ ಸೇವಾ ಕಾರ್ಯಗಳ ಬಗ್ಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅರಿವು ಮೂಡಿಸುವುದು ಹಾಗೂ ಆ ಸೇವೆಗಳ ಸದುಪಯೋಗ ಎಲ್ಲರಿಗೂ ತಲುಪುವಂತೆ ಮಾಡುವುದು ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆ ಸಕಲೇಶಪುರ ಅಧ್ಯಕ್ಷ ರವಿಕುಮಾರ್, ಶಾಲೆಯ ಮುಖ್ಯೋಪಾಧ್ಯಾಯ ಈಶ್ವರಪ್ಪ ಹಕಾರಿ, ಜಿಲ್ಲಾ ಜನಜಾಗೃತಿ ವೇದಿಕೆ ಹಾಸನದ ಸದಸ್ಯರಾದ ಗಿರೀಶ್ ಮಂಜುನಾಥ್ ಹಾಗೂ ಸಂತೋಷ್, ಹೆಗ್ಗಡೆ ವಲಯದ ಮೇಲ್ವಿಚಾರಕಿ ಮೋಹಿನಿ, ಕಸಬಾ ವಲಯದ ಮೇಲ್ವಿಚಾರಕ ಚಿರಂತ್, ಸೇವಾ ಪ್ರತಿನಿಧಿಗಳಾದ ದಿವ್ಯಾ ಹಾಗೂ ಶ್ರೀಧರ್, ಶೌರ್ಯ ಘಟಕದ ಕ್ಯಾಪ್ಟನ್ ಪ್ರಸನ್ನಕುಮಾರ್, ಸದಸ್ಯರಾದ ಷಣ್ಮುಖ ಎಚ್.ಡಿ., ಮಂಜುನಾಥ್, ಭಾಸ್ಕರ್ ಹಾಗೂ ಪ್ರವೀಣ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಮಕ್ಕಳಿಗೆ ಸಿಹಿ ವಿತರಣೆ ಮಾಡಲಾಯಿತು. ಅಲ್ಲದೆ, ಮಕ್ಕಳಿಗೆ ಊಟದ ವ್ಯವಸ್ಥೆ ಕಲ್ಪಿಸಿ ಸಂಭ್ರಮದಿಂದ ಸೇವಾ ಕಾರ್ಯಕ್ರಮವನ್ನು ಆಚರಿಸಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *