ಆಲೂರು : ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಪಡಿತರ ವಿತರಣಾ ವ್ಯವಸ್ಥೆಯಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಸರ್ವರ್ ಹಾಗೂ ಬಯೋಮೆಟ್ರಿಕ್ (ಹೆಬ್ಬೆಟ್ಟು ಗುರುತು) ತಾಂತ್ರಿಕ ದೋಷದಿಂದಾಗಿ ಬಡ ಹಾಗೂ ಮಧ್ಯಮ ವರ್ಗದ ಗ್ರಾಹಕರು ಪಡಿತರ ಅಕ್ಕಿಗಾಗಿ ತೀವ್ರ ಪರದಾಡುವಂತಾಗಿದೆ.

ತಿಂಗಳ ಪಡಿತರ ಪಡೆಯಲು ಬೆಳಗ್ಗೆಯಿಂದಲೇ ನ್ಯಾಯಬೆಲೆ ಅಂಗಡಿಗಳ ಮುಂದೆ ಸಾಲುಗಟ್ಟಿ ನಿಲ್ಲುವ ಸಾರ್ವಜನಿಕರಿಗೆ ‘ಸರ್ವರ್ ಡೌನ್’ ಎಂಬ ಉತ್ತರವೇ ಸಿಗುತ್ತಿದೆ. ಒಬ್ಬ ಗ್ರಾಹಕರ ಹೆಬ್ಬೆಟ್ಟು ಗುರುತು ಸ್ಕ್ಯಾನ್ ಆಗಲು ಗಂಟೆಗಟ್ಟಲೆ ಸಮಯ ಹಿಡಿಯುತ್ತಿದೆ. ಇದರಿಂದಾಗಿ ಅಂಗಡಿಗಳ ಮುಂದೆ ನೂಕುನುಗ್ಗಲು ಉಂಟಾಗುತ್ತಿದ್ದು, ವೃದ್ಧರು, ಮಹಿಳೆಯರು ಹಾಗೂ ಕೂಲಿ ಕಾರ್ಮಿಕರು ಬಿಸಿಲಿನಲ್ಲಿ ಕಾದು ಸುಸ್ತಾಗುತ್ತಿದ್ದಾರೆ.

ಕೂಲಿ ಬಿಟ್ಟು ಬರುವವರಿಗೆ ಸಂಕಷ್ಟ:

“ದಿನದ ಕೂಲಿ ಕೆಲಸ ಬಿಟ್ಟು ಪಡಿತರ ಅಕ್ಕಿಗಾಗಿ ಬೆಳಗ್ಗೆಯಿಂದ ಕಾಯುತ್ತಿದ್ದೇವೆ. ಆದರೆ ಸರ್ವರ್ ಇಲ್ಲ ಎಂದು ಅಂಗಡಿಯವರು ಹೇಳುತ್ತಿದ್ದಾರೆ. ಹೀಗೆ ನಾಲ್ಕೈದು ದಿನಗಳಿಂದ ಅಲೆದಾಡುತ್ತಿದ್ದರೂ ಅಕ್ಕಿ ಸಿಗುತ್ತಿಲ್ಲ. ತಾಂತ್ರಿಕ ಸಮಸ್ಯೆಯ ನೆಪದಲ್ಲಿ ಬಡವರ ಹೊಟ್ಟೆ ಮೇಲೆ ಹೊಡೆಯಲಾಗುತ್ತಿದೆ,” ಎಂದು ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

.ಆಗ್ರಹ:

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ತಕ್ಷಣವೇ ಈ ತಾಂತ್ರಿಕ ದೋಷವನ್ನು ಸರಿಪಡಿಸಬೇಕು. ಸರ್ವರ್ ಸಮಸ್ಯೆ ಇರುವ ಕಡೆ ಪರ್ಯಾಯ ವ್ಯವಸ್ಥೆಯ ಮೂಲಕ ಪಡಿತರ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *