ಹಾಸನ: ಡಿಸೆಂಬರ್ 2ರಂದು ಹಾಸನದ ಕಲಾಭವನದ ಮುಂಭಾಗ ನಡೆಯಲಿರುವ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರುಗಳ ಜನಜಾಗೃತಿ ಧರ್ಮ ಸಮಾರಂಭಕ್ಕೆ ಸಂಪೂರ್ಣ ಸಹಕಾರ ನೀಡುವುದಾಗಿ ಹಾಸನ ಕ್ಷೇತ್ರದ ಶಾಸಕ ಸ್ವರೂಪ್ ಪ್ರಕಾಶ್ ತಿಳಿಸಿದ್ದಾರೆ.

ನವೆಂಬರ್ 26ರಂದು ಜನಜಾಗೃತಿ ಧರ್ಮ ಸಮಾರಂಭದ ಸಮಿತಿಯ ಪದಾಧಿಕಾರಿಗಳು ಶಾಸಕರ ನಿವಾಸಕ್ಕೆ ತೆರಳಿ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಸಂದರ್ಭದಲ್ಲಿ ಅವರು ಈ ಭರವಸೆ ನೀಡಿದರು.

ಬಾಳೆಹೊನ್ನೂರು ಶ್ರೀ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಈ ಧರ್ಮ ಸಮಾರಂಭವನ್ನು ಹಾಸನ ಜಿಲ್ಲಾ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಶಾಸಕ ಸ್ವರೂಪ್ ಪ್ರಕಾಶ್ ಹೇಳಿದರು.

ಕಾರ್ಯಕ್ರಮದ ಪೆಂಡಾಲ್ ವ್ಯವಸ್ಥೆ ಸೇರಿದಂತೆ ವಿವಿಧ ಸೇವಾ ಕಾರ್ಯಗಳಿಗೆ ಅಗತ್ಯ ಸಹಕಾರ ನೀಡುವುದಾಗಿ ತಿಳಿಸಿದ ಅವರು, ಇಂತಹ ಧಾರ್ಮಿಕ ಹಾಗೂ ಧರ್ಮ ಜಾಗೃತಿ ಕಾರ್ಯಕ್ರಮಗಳು ಸಮಾಜದಲ್ಲಿ ನಡೆಯುವುದು ಅತ್ಯಂತ ಅಗತ್ಯವಾಗಿದೆ ಎಂದರು.

ಧರ್ಮ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *