
ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ನೇರವಾಗಿ ಖಾತೆಗೆ ಹಣ ವರ್ಗಾವಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಬಿಪಿಎಲ್ ಕಾರ್ಡ್‌ಗೆ ಆಧಾರ್ ಲಿಂಕ್ ಇದ್ದರೆ ಮಾತ್ರ ಬ್ಯಾಂಕ್‌ಗೆ ಹಣ : ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವವರು 1.28 ಕೋಟಿ ಇದ್ದು, ಇದರಲ್ಲಿ 1.22 ಕೋಟಿ ಮಂದಿ ಆಧಾರ್ ಲಿಂಕ್ ಮಾಡಿಸಿಕೊಂಡಿದ್ದಾರೆ. ಆದರೆ, ಇನ್ನೂ 6 ಲಕ್ಷ ಬಿಪಿಎಲ್ ಕಾರ್ಡ್‌ದಾರರು ಆಧಾರ್ ಲಿಂಕ್ ಮಾಡಿಸಿಲ್ಲ. ಆಧಾರ್ ಲಿಂಕ್ ಇದ್ದರೆ ಮಾತ್ರ ಐದು ಕೆಜಿ ಅಕ್ಕಿ ಬದಲಿಗೆ ಕೊಡುವ ಹಣ ಬ್ಯಾಂಕ್ ಖಾತೆಗೆ ಜಮೆ ಆಗುತ್ತದೆ. ಮನೆ ಯಜಮಾನನ ಬ್ಯಾಂಕ್ ಖಾತೆಗೆ ಹಣ ಹಾಕಲು ಸರ್ಕಾರ ನಿರ್ಧರಿಸಿದೆ.
ಅರ್ಜಿ ಸಲ್ಲಿಸುವ ಅಗತ್ಯವಿಲ್ಲ: ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಬದಲಿಗೆ ನೀಡುವ ಹಣ ಪಡೆಯಲು ಜನರು ಯಾವುದೇ ಅರ್ಜಿ ಸಲ್ಲಿಸಬೇಕಿಲ್ಲ. ಸರ್ಕಾರದ ಬಳಿ ಇರುವ ಪಡಿತರ ಚೀಟಿದಾರರ ದತ್ತಾಂಶ ಆಧರಿಸಿ ಸರ್ಕಾರವೇ ‘ನೇರ ನಗದು ವರ್ಗಾವಣೆ’ (ಡಿಬಿಟಿ) ಮೂಲಕ ಹಣ ವರ್ಗಾವಣೆ ಮಾಡಲಿದೆ. ಈಗಾಗಲೇ ಪಡಿತರ ಚೀಟಿಗಳಿಗೆ ಆಧಾರ್ ಲಿಂಕ್ ಆಗಿದೆ. ಆಧಾರ್‌ಗೆ ಬ್ಯಾಂಕ್ ಖಾತೆ ಲಿಂಕ್ ಆಗಿರುತ್ತದೆ. ‘ಗೃಹಜ್ಯೋತಿ’ ಅಡಿ ನೋಂದಣಿ ಮಾಡುವ ಮಾಹಿತಿಯನ್ನೂ ಪೂರಕವಾಗಿ ಬಳಸಿಕೊಳ್ಳಲಾಗುತ್ತದೆ.
