ಹೆತ್ತೂರು: ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯನ್ನು ಶಾಸಕರ ಮಾದರಿ ಶಾಲೆಯಾಗಿ ದತ್ತು ಸ್ವೀಕಾರ ಮಾಡುವುದಾಗಿ ಶಾಸಕರಾದ ಸಿಮೆಂಟ್ ಮಂಜು ಅವರು ಇಂದು ನಡೆದ ಪೋಷಕರ ಸಭೆಯಲ್ಲಿ ತಿಳಿಸಿದರು.
2023-24ನೇ ಸಾಲಿನ ಮೊದಲ ಪೋಷಕರ ಸಭೆಯಲ್ಲಿ ಪಾಲ್ಗೊಂಡ ಅವರು ಶಾಲೆಯ ಶೌಚಾಲಯ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮತ್ತು ಅಡುಗೆ ಕೊಠಡಿಯನ್ನು ಶೀಘ್ರದಲ್ಲೇ ನಿರ್ಮಾಣ ಮಾಡಲಾಗುವುದು ಎಂದರು.
ಪ್ರಾಂಶುಪಾಲ ಮಂಜುನಾಥ ಬಿ.ಡಿ. ಪ್ರಾಸ್ತಾವಿಕವಾಗಿ ಮಾತನಾಡಿ ಸಂಸ್ಥೆಯ ಇತಿಹಾಸ, ವಿದ್ಯಾರ್ಥಿಗಳ ಸಂಖ್ಯೆ, ವಿವಿಧ ಚಟುವಟಿಕೆಗಳ ಮಾಹಿತಿಯನ್ನು ನೀಡಿದರು.ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಸೂಯಾ, ಶಾಲಾಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಚಿನ್ ಹೆಚ್.ಎಂ. ಸಮಾಜ ಸೇವಕ ಮತ್ತು ದಾನಿಗಳಾದ ಕಾಮನಹಳ್ಳಿ ಕೀರ್ತಿ, ನಿವೃತ್ತ ಶಿಕ್ಷಕ ಶ್ರೀ ಲವ ಮೊದಲಾದವರು ಶಾಲೆಯ ಅಗತ್ಯಗಳ ಕುರಿತು ಶಾಸಕರಿಗೆ ಮಾಹಿತಿ ನೀಡಿದರು.
ಪ್ರೌಢಶಾಲಾ ಮುಖ್ಯ ಶಿಕ್ಷಕಿ ಲತಾ ಬಿ.ಕೆ., ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಶಾರದಮ್ಮ, ಇತರೆ ಶಿಕ್ಷಕ ವೃಂದ, ಗ್ರಾಮ ಪಂಚಾಯಿತಿ ಸದಸ್ಯರಾದ ಶ್ರೀ ಡೀಲಾಕ್ಷ, ಶ್ರೀ ನಾಗರಾಜು, ಪೋಷಕರು, ಬೇರೆ ಬೇರೆ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.ಕಾರ್ಯಕ್ರಮವನ್ನು ಕನ್ನಡ ಉಪನ್ಯಾಸಕಿ ಮಂಜುಳಾ ನಿರೂಪಿಸಿದರೆ, ದೈಹಿಕ ಶಿಕ್ಷಣ ಶಿಕ್ಷಕ ರಮೇಶ್ ಸ್ವಾಗತಿಸಿ, ಸಮಾಜ ವಿಜ್ಞಾನ ಶಿಕ್ಷಕಿ ನಿರ್ಮಲಾ ವಂದಿಸಿದರು.