
ಬೆಂಗಳೂರು : ‘ಅನ್ನ ಭಾಗ್ಯ’ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಾರ್ಡುದಾರರಿಗೆ ಹಣ ವರ್ಗಾವಣೆ ಮಾಡುವ ಪ್ರಕ್ರಿಯೆ ಜುಲೈ 10 ರಂದು ಪ್ರಾರಂಭವಾಗಲಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಶೀಘ್ರದಲ್ಲೇ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ತಿಂಗಳು ಅಕ್ಕಿ ಬದಲು ಹಣ ನೀಡುವುದಾಗಿ ಹೇಳಿದ್ದೆವು. ಜುಲೈ 1ರಂದು ಹಣ ವರ್ಗಾವಣೆ ಮಾಡುವುದಾಗಿ ಹೇಳಿರಲಿಲ್ಲ. ಫಲಾನುಭವಿಗಳಿಗೆ ಹಣ ವರ್ಗಾವಣೆ ಪ್ರಕ್ರಿಯೆ ಜುಲೈ 10ರಿಂದ ಆರಂಭವಾಗಲಿದೆ. ಈ ತಿಂಗಳ ಹಣವನ್ನು ಈ ತಿಂಗಳಲ್ಲೇ ಜನರಿಗೆ ವರ್ಗಾಯಿಸಲಾಗುವುದು ಎಂದು ಸಿದ್ದರಾಮಯ್ಯ ಹೇಳಿದರು.
