ಸಕಲೇಶಪುರ : ವಿಚಾರಣೆ ನಡೆಸುವ ಬರದಲ್ಲಿ ಹಿಂದೂ ಕಾರ್ಯಕರ್ತರ ಮನೆಗಳಿಗೆ ನುಗ್ಗಿ ದೈಹಿಕ ಹಲ್ಲೆ ನಡೆಸುವುದನ್ನು ಸಹಿಸುವುದಿಲ್ಲ ಎಂದು ಶಾಸಕ ಸಿಮೆಂಟ್ ಮಂಜುನಾಥ್ ಹೇಳಿದ್ದಾರೆ.

ಶುಕ್ರವಾರ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಹಿಂದೂ ಮುಖಂಡ ರಘು ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧ ಪಟ್ಟಂತೆ ಮನಸೋ ಇಚ್ಛೆ ಇಂದು ಕಾರ್ಯಕರ್ತರ ಮನೆಗಳಿಗೆ ರಾತ್ರೋರಾತ್ರಿ ಹೋಗಿ ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ಸಂಘಟನೆ ಕಾರ್ಯಕರ್ತರ ಮನೆಯ ಪೋಷಕರಿಗೆ ಭಯದ ವಾತಾವರಣ ಸೃಷ್ಟಿ ಮಾಡುವ ಮೂಲಕ ಹಿಂದೂ ಸಂಘಟನೆಯನ್ನು ಹತ್ತಿಕ್ಕುವ ಕೆಲಸವನ್ನು ಸರ್ಕಾರ ಪೊಲೀಸ್ ಅಧಿಕಾರಿಗಳ ಮೂಲಕ ಮಾಡುತ್ತಿದೆ ಎಂದು ಆರೋಪಿಸಿದರು.

ಇದೆ ಸಂದರ್ಭದಲ್ಲಿ ಘಟನೆಗೆ ಸಂಬಂಧಿಸಿದಂತೆ ಮಾತನಾಡಿದ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರುಳಿ ಕೃಷ್ಣ ವಸಂತಡ್ಕ ಸಕಲೇಶಪುರ ಭಾಗದಲ್ಲಿ ನಡೆದಿರುವ ನಾವೆಲ್ಲ ಗೋವನ್ನು ಪೂಜ್ಯ ಭಾವನೆಯಿಂದ ನೋಡುವಂತ ಸಂದರ್ಭದಲ್ಲಿ ಗೋವನ್ನು ಹತ್ಯೆಮಾಡಿರುವ ಆರೋಪಿಗಳನ್ನು ಬಂದಿಸಿರುವುದನ್ನು ನಾವು ಸ್ವಾಗತಿಸುತ್ತೇವೆ

ಆ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಹಿಂದೂ ಸಂಘಟನೆಯ ಮೂಲಕ ಪ್ರತಿಭಟನೆ ಮಾಡುವ ಸಂದರ್ಭದಲ್ಲಿ ಹಿಂದೂ ಸಂಘಟನೆಯ ಮುಖಂಡ. ರಘು ಸಕಲೇಶಪುರ ಪ್ರಚೋದನಾಕಾರಿ ಭಾಷಣ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯವರು ಕಾನೂನು ರೀತಿ ಕ್ರಮ ಕೈಗೊಳ್ಳಲಿ ಆದರೆ ರಾತ್ರೋ ರಾತ್ರಿ ಸೀನಿಯರ್ ಸಿಟಿಜನ್ ಆಗಿರುವ ರಘು ಅವರ ತಂದೆ ತಾಯಿ ಅವರನ್ನು ಮನೆಯಲ್ಲಿ ವಿಚಾರಣೆ ಮಾಡುವುದು ಎಷ್ಟು ಸರಿ ಎಂದು ಪ್ರಶ್ನೆಮಾಡಿದ ಅವರು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಿಂದೂ ಸಂಘಟನೆಯನ್ನು ಹತ್ತಿಕ್ಕುವ ಕೆಲಸವನ್ನು ಅಧಿಕಾರಿಗಳ ಮೂಲಕ ಮಾಡುತ್ತಿದ್ದು ಇದಾವುದಕ್ಕೂ ನಮ್ಮ ಸಂಘಟನೆ ಹೆದರುವುದಿಲ್ಲ ಮುಂದಿನ ದಿನಗಳಲ್ಲಿ ಸಂಘಟನೆಯ ಶಕ್ತಿಯನ್ನು ತೋರಿಸುತ್ತೇವೆ ಎಂದರು.

ಮೂಡಿಗೆರೆ ಬಿಜೆಪಿ ಪರಾಜಿತ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಮಾತನಾಡಿ ಘಟನೆ ನಡೆದಿರುವುದು ಸಕಲೇಶಪುರದಲ್ಲಿ ಆದರೆ ಮೂಡಿಗೆರೆ ತಾಲೂಕಿನ ನಮ್ಮ. ಸಂಘಟನೆಯ ಕಾರ್ಯಕರ್ತ ಅವಿನಾಶ್ ಎಂಬ ಯುವಕನನ್ನು ಪೊಲೀಸ್ ಇಲಾಖೆಯವರು ವಶಕ್ಕೆ ಪಡೆದು ವಿಚಾರಣೆ ಮಾಡುವ ನೆಪದಲ್ಲಿ ಆತನ ಮೇಲೆ ಹಲ್ಲೆ ಮಾಡಿರುವುದು ಸರಿಯಲ್ಲ ಅವಿನಾಶ್ ನನ್ನು ವೈದ್ಯಕೀಯ ಪರೀಕ್ಷೆ ಮಾಡಿಸುವ ಮೂಲಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದರು

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ಮೈಪಾಲ್ ,ಬಿಜೆಪಿ ಮುಖಂಡ ರಾಜಕುಮಾರ್, ಬಿಜೆಪಿ ಹಿರಿಯ ಮುಖಂಡ ರಾಮಚಂದ್ರು, ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ಜಿತೇಂದ್ರ, ಇತರರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *