
ಸಕಲೇಶಪುರ : ಸಕಲೇಶಪುರ ವಿಧಾನಸಭಾ ಕ್ಷೇತ್ರದ ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಕಲೇಶಪುರ ಪುರಸಭಾ ಸದಸ್ಯರಾದಂತಹ ಅನ್ನಪೂರ್ಣ ರವರನ್ನು ಜಿಲ್ಲಾಧ್ಯಕ್ಷರಾದಂತಹ ತಾರಾ ಚಂದನ್ ರವರ ಆದೇಶದ ಮೇರೆಗೆ ತಾಲೂಕು ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಆಯ್ಕೆಯಾದ ಅಧ್ಯಕ್ಷರಿಗೆ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಮುರಳಿ ಮೋಹನ್ ಹಾಗೂ ತಾಲೂಕು ಕಾಂಗ್ರೆಸ್ ಅಧ್ಯಕ್ಷರಾದ ಬೈರಮುಡಿ ಚಂದ್ರಣ್ಣ ಮತ್ತು ಕಾಂಗ್ರೆಸ್ ಮುಖಂಡರುಗಳು ಅಭಿನಂದಿಸಿದರು.
